ವಿಜಯನಗರ ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ರಾಜ್ಯ ಕರಾಟೆ ಶಿಕ್ಷಕರ ಸಂಘದ ಏಳನೇ ಮಹಾಸಭೆಯಲ್ಲಿ ರಾಜ್ಯ ಕರಾಟೆ ಶಿಕ್ಷಕರ ಸಂಘದ ವತಿಯಿಂದ ಕೊಡಮಾಡುವ ಜಿಲ್ಲಾ ಉತ್ತಮ ಅಧ್ಯಕ್ಷ ಪ್ರಶಸ್ತಿಯನ್ನು ಮೂಡುಬಿದಿರೆಯ ಕರಾಟೆ ಶಿಕ್ಷಕ,ಸಂಘಟಕ ಸರ್ಫರಾಝ್ ಖಾದ್ರಿ ಅವರಿಗೆ ಪ್ರದಾನ ಮಾಡಲಾಯಿತು.
ಸರ್ಫರಾಝ್ ಅವರು ಕಳೆದ ಹಲವು ವರ್ಷಗಳಿಂದ ಸಾವಿರಾರು ವಿದ್ಯಾರ್ಥಿಗಳಿಗೆ ಕರಾಟೆ ತರಬೇತಿಯನ್ನು ನೀಡುವ ಜೊತೆಗೆ ರಾಜ್ಯ, ರಾಷ್ಟ್ರಮಟ್ಟದ ಪ್ರಶಸ್ತಿಗಳನ್ನು ಗಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.ಅಲ್ಲದೆ ಉತ್ತಮ ಸಂಘಟನೆ ಮೂಲಕ ಗಮನಸೆಳೆದಿದ್ದಾರೆ.ಸರ್ಫರಾಝ್ ಅವರ ಈ ಸಾಧನೆಗಳನ್ನು ಗುರುತಿಸಿ ಈ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
ಅಖಿಲ ಕರ್ನಾಟಕ ಸ್ಪೋರ್ಟ್ಸ್ ಕರಾಟೆ ಸಂಸ್ಥೆಯ ರಾಜ್ಯಾಧ್ಯಕ್ಷ ಅರುಣ್ ಮಾಚಯ್ಯ, ಪ್ರಧಾನ ಕಾರ್ಯದರ್ಶಿ ಭಾರ್ಗವ ರೆಡ್ಡಿ,ಕರ್ನಾಟಕ ರಾಜ್ಯ ಕರಾಟೆ ಶಿಕ್ಷಕರ ಸಂಘದ ಅಧ್ಯಕ್ಷ ಮುಹಮ್ಮದ್ ನದೀಮ್,ಪ್ರಧಾನ ಕಾರ್ಯದರ್ಶಿ ರೆವಿ ಸಾಲಿಯರ್ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.






