ಲವ್ ಫೈಲ್ಯೂರ್: ವೈಬ್ರೆಂಟ್ ಸ್ಟೂಡೆಂಟ್ ಸುಸೈಡ್

Picture of Namma Bedra

Namma Bedra

Bureau Report

ಮೂಡುಬಿದಿರೆಯ ನ್ಯೂ ವೈಬ್ರೆಂಟ್ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಯೋರ್ವ ತಾನು ವಾಸ್ತವ್ಯದಲ್ಲಿದ್ದ ರೂಮಿನಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಬೆಳಗಾವಿ ಜಿಲ್ಲೆ ನೆಹರುನಗರದ ವಿನಾಯಕ ಟಿ.ಮಿಸಾಳ ಅವರ ಮಗ ಸೂರ್ಯಮ್ ವಿನಾಯಕ ಮಿಸಾಳ (17) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ.
ಈತ ಮೂಡುಬಿದಿರೆಯ ನ್ಯೂ ವೈಬ್ರೆಂಟ್ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದು ಡೆತ್ ನೋಟ್ ಬರೆದಿಟ್ಟು ಮಂಗಳವಾರ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ತನ್ನದೇ ಊರಿನ ಯುವತಿಯೋರ್ವಳನ್ನು ಪ್ರೀತಿಸುತ್ತಿದ್ದು ಆ ಪ್ರೀತಿಗೆ ಅದ್ಹೇಗೋ ಬ್ರೇಕ್ ಬಿದ್ದಿತ್ತೆನ್ನಲಾಗಿದ್ದು ಇದೇ ಜಿಗುಪ್ಸೆಯಿಂದ ಈತ ಈ ಕೃತ್ಯವೆಸಗಿಕೊಂಡಿದ್ದಾನೆಂದು ಹೇಳಲಾಗುತ್ತಿದೆ.ಮೂಡುಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಪಿ.ಜಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

Scroll to Top