ಪಡುಮಾರ್ನಾಡು: ಮುದ್ದುಕೃಷ್ಣ ವೇಷ ಸ್ಪರ್ಧೆ ಮತ್ತು ಮೊಸರು ಕುಡಿಕೆ ಕಾರ್ಯಕ್ರಮ

Picture of Namma Bedra

Namma Bedra

Bureau Report

ಪಡುಮಾರ್ನಾಡು ಯುವಕ ಮಂಡಲ ಮತ್ತು ಪ್ರಜ್ಞಾ ಯುವತಿ ಮಂಡಲ,ಜಿಲ್ಲಾ ಬಾಲಭವನ ಸಮಿತಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇದರ ವತಿಯಿಂದ ದಿ.ಕೃಷ್ಣಪ್ಪ ಪೂಜಾರಿ ಸ್ಮರಣಾರ್ಥ ಮುದ್ದುಕೃಷ್ಣ ವೇಷ ಸ್ಪರ್ಧೆ ಮತ್ತು ಮೊಸರು ಕುಡಿಕೆ ಕಾರ್ಯಕ್ರಮವು ಯುವಕ ಮಂಡಲದ ಅಧ್ಯಕ್ಷರಾದ ಭರತ್ ಕೆ.ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಶ್ರೀ ಕ್ಷೇತ್ರ ಹೊಯ್ಪಾಲಬೆಟ್ಟದ ಆಡಳಿತ ಮೊಕ್ತೇಸರರಾದ ರಾಜೇಶ್ ಬಲ್ಲಾಳ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಮಾರ್ನಾಡು ಅಸ್ರಣ್ಣರಾದ ಅನಂತಪದ್ಮನಾಭ ಅಸ್ರಣ್ಣ ಆಶೀರ್ವಚನವಿತ್ತರು.
ಗ್ರಾಮ ಪಂಚಾಯತ್ ಅಧ್ಯಕ್ಷ ವಾಸುದೇವ ಉಪಾಧ್ಯಾಯ, ವಾಣಿಜ್ಯ ತೆರಿಗೆ ಇಲಾಖೆಯ ನಿವೃತ್ತ ಅಧಿಕಾರಿ ಎ.ಯತೀಂದ್ರ,ಶಾಲಾ ನಿವೃತ್ತ ಮುಖ್ಯೋಪಾಧ್ಯಾಯರಾದ ಜಯ ಬಿ, ಮಂಗಳೂರು ಗ್ರಾಮಾಂತರದ ಸಿ.ಡಿ.ಪಿ.ಒ ಶ್ರೀಮತಿ ಶೈಲಾ ಕೆ, ಅಂಗನವಾಡಿ ಮೇಲ್ವಿಚಾರಕಿ ಶ್ರೀಮತಿ ಕಾತ್ಯಾಯಿನಿ,ಪಂಚಾಯತ್ ಸದಸ್ಯರಾದ ರಮೇಶ್ ಎಸ್.ಶೆಟ್ಟಿ, ಯುವತಿ ಮಂಡಲದ ಅಧ್ಯಕ್ಷೆ ಶ್ರೀಮತಿ ಆಶಾ ಸುರೇಂದ್ರ, ಭವಿಷ್ಯತ್ ಕೋಟ್ಯಾನ್ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ದಿ.ಕೃಷ್ಣಪ್ಪ ಅವರ ಧರ್ಮಪತ್ನಿ ಶ್ರೀಮತಿ ದೇವಕಿ,ಯುವಕ ಮಂಡಲದ ಹಿರಿಯ ಸದಸ್ಯರಾದ ಸದಾಶಿವ ಶೆಟ್ಟಿ ಹಾಗೂ ನವೀನ್ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು.
ಕಾರ್ಯದರ್ಶಿ ಪ್ರಜ್ವಲ್ ಪೂಜಾರಿ ಸ್ವಾಗತಿಸಿ ಸಾಂಸ್ಕೃತಿಕ ಕಾರ್ಯದರ್ಶಿ ಭವಿಷ್ಯತ್ ಕೋಟ್ಯಾನ್, ಸಂದೀಪ್ ಆಚಾರ್ಯ, ಮಾಜಿ ಅಧ್ಯಕ್ಷ ವೈಷ್ಣವ್ ಹೆಗ್ಡೆ ಕಾರ್ಯಕ್ರಮ ನಿರೂಪಿಸಿದರು.

ಈ ರೀತಿಯ ಇನ್ನಷ್ಟು ಸುದ್ದಿಗಳು

Scroll to Top