ನಿಡ್ಡೋಡಿಯ ಮಹೇಶ ಎಂಬಾತನ ಮನೆಯಲ್ಲಿ ನಡೆದ ಗ್ಯಾಂಗ್ ರೇಪ್ ಆರೋಪಿಗಳನ್ನು ಮೂಡುಬಿದಿರೆ ಪೊಲೀಸರು ಬಂಧಿಸಿದ್ದು ಎಲ್ಲ ನಾಲ್ಕು ಮಂದಿ ಆರೋಪಿಗಳ ವಿರುದ್ಧ ಪೋಕ್ಸೊ ಪ್ರಕರಣ ದಾಖಲಾಗಿದೆ.
ನಿಡ್ಡೋಡಿಯ ಮಹೇಶ, ಕಟೀಲು ಪರಿಸರದ ಯಜ್ಞೇಶ,ದಿಲೀಪ್ ಹಾಗೂ ಶ್ರೀಕಾಂತ್ ಈ ಪ್ರಕರಣದ ಆರೋಪಿಗಳಾಗಿದ್ದಾರೆ.
ನಿಡ್ಡೋಡಿಯ ಮಹೇಶನ ಮನೆಯಲ್ಲಿ ಇಬ್ಬರು ಅಪ್ರಾಪ್ತ ಬಾಲಕಿಯರೊಂದಿಗೆ ಗ್ಯಾಂಗ್ ರೇಪ್ ಯತ್ನ ನಡೆದಿತ್ತೆನ್ನಲಾಗಿದ್ದು ಮೂಡುಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಪಿ.ಜಿ.ಅವರ ಸಮಯಪ್ರಜ್ಞೆಯಿಂದ ಸಂಭಾವ್ಯ ಪ್ರಕರಣವೊಂದು ತಪ್ಪಿ ಹೋಗಿತ್ತು.
ಆರೋಪಿಗಳೆಲ್ಲಾ ಸೇರಿಕೊಂಡು ಆ ಕೃತ್ಯಕ್ಕೆ ಸ್ಕೆಚ್ ಹಾಕಿದ್ದರು. ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ ಅಪ್ರಾಪ್ತ ಬಾಲಕಿಯರನ್ನು ಮತ್ತು ಆರೋಪಿಗಳನ್ನು ವಶಕ್ಕೆ ಪಡೆದು ಠಾಣೆಗೆ ಕೊಂಡೊಯ್ದಿದ್ದರು.
ಮಹೇಶ ಮನೆಯಲ್ಲಿ ಆತನೊಬ್ಬನೇ ಇದ್ದು ಈ ಕೃತ್ಯಕ್ಕೆ ಆತನ ಸ್ನೇಹಿತರನ್ನು ಕರೆಸಿಕೊಂಡಿದ್ದ.ಮನೆಯಲ್ಲಿ ಲೈಂಗಿಕ ಕ್ರಿಯೆಗೆ ಬಳಸುವ ಕಾಂಡೋಮ್, ಸ್ಪ್ರೇ ಮುಂತಾದ ವಸ್ತುಗಳು ಪತ್ತೆಯಾಗಿದೆಯೆನ್ನಲಾಗಿದೆ.





