ನಿಡ್ಡೋಡಿಯ ಮನೆಯೊಂದರಲ್ಲಿ ಅತ್ಯಾಚಾರಕ್ಕೆತ್ನಿಸಿದ್ದ ನಾಲ್ವರನ್ನು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಬಂಧಿಸಿರುವ ಮೂಡುಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಪಿ.ಜಿ.ಮತ್ತು ಪೊಲೀಸರ ತಂಡವನ್ನು ಜನವಾದಿ ಮಹಿಳಾ ಸಂಘಟನೆ ಮೂಡುಬಿದಿರೆ ತಾಲೂಕು ಸಮಿತಿ ಅಭಿನಂದಿಸಿದೆ.
ಇನ್ಸ್ಪೆಕ್ಟರ್ ಸಂದೇಶ್ ಪಿ.ಜಿ.ಅವರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಸಿದ ಸಮಿತಿಯು ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕೆಂದು ಆಗ್ರಹಿಸಿದೆ.
ನಿಯೋಗದಲ್ಲಿ ಜನವಾದಿ ಮಹಿಳಾ ಸಂಘಟನೆಯ ತಾಲೂಕು ಕಾರ್ಯದರ್ಶಿ ಲಕ್ಷ್ಮಿ, ಸದಸ್ಯರಾದ ಗಿರಿಜಾ, ಸಿಪಿಐ ಪಕ್ಷದ ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯ ವಸಂತ ಆಚಾರಿ ಇದ್ದರು.






