ಉದ್ಯಮಿ, ಬಜಗೋಳಿಯ ಡಾ.ರವೀಂದ್ರ ಶೆಟ್ಟಿ ಅವರ ಮನೆಯಲ್ಲಿ ನಾಳೆ ಗೋದಾನ ಕಾರ್ಯಕ್ರಮ ನಡೆಯಲಿದೆ.
ಕಳೆದ ಐದು ವರ್ಷಗಳಿಂದ ಈ ಕಾರ್ಯಕ್ರಮವನ್ನು ಮಾಡುತ್ತಾ ಬಂದಿರುವ ಅವರು ಯಾವ ಮನೆಯಲ್ಲಿ ಗೋ ಕಳ್ಳತನ ಆಗಿದೆಯೋ ಆ ಮನೆಗೆ ಗೋದಾನ ಮಾಡುವ ಮೂಲಕ ಮಾದರಿಯಾಗಿದ್ದಾರೆ.
ನಾಳೆ ಬೆಳಿಗ್ಗೆ 9 ಗಂಟೆಗೆ ಭಜನಾ ಕಾರ್ಯಕ್ರಮ ನಡೆಯಲಿದ್ದು 10 ಗಂಟೆಗೆ ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಾಧೀಶರಾದ ಎನ್.ಸಂತೋಷ್ ಹೆಗ್ಡೆಯವರ ಅಧ್ಯಕ್ಷತೆಯಲ್ಲಿ ಸಭಾ ಕಾರ್ಯಕ್ರಮ ನಡೆಯಲಿದೆ.
ಡಾ.ಎಂ.ಮೋಹನ ಆಳ್ವರವರು ಗೋವುಗಳ ಹಸ್ತಾಂತರ ಮಾಡಲಿದ್ದು ಶಾಸಕ ಸುನಿಲ್ ಕುಮಾರ್ ಸಹಿತ ಹಲವು ಗಣ್ಯರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಪತ್ರಕರ್ತೆ ವಿಜಯಲಕ್ಷ್ಮಿ ಶಿಬರೂರು,ಖ್ಯಾತ ವೈದ್ಯೆ ಡಾ.ಮೇಘನಾ ಶೆಟ್ಟಿ ನಿಟ್ಟೆ ಹಾಗೂ ಹೈಕೋರ್ಟ್ ನ್ಯಾಯವಾದಿ ಶ್ರೀಮತಿ ದೀಕ್ಷಾ ಎನ್.ಅಮೃತೇಶ್ ಅವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಗುವುದೆಂದು ಡಾ.ರವೀಂದ್ರ ಶೆಟ್ಟಿ ಬಜಗೋಳಿ ಅವರು ತಿಳಿಸಿದ್ದಾರೆ.







































