ಮೂಡುಬಿದಿರೆ ಕಲ್ಲಬೆಟ್ಟುವಿನಲ್ಲಿ ನೂತನವಾಗಿ ನಿರ್ಮಿಸಲಾಸ ಎಕ್ಸಲೆಂಟ್ ಶೈಕ್ಷಣಿಕ ಕಟ್ಟಡವನ್ನು ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಾಧೀಶರೂ,ಆಂಧ್ರಪ್ರದೇಶದ ರಾಜ್ಯಪಾಲರಾಗಿರುವ ಜ.ಅಬ್ದುಲ್ ನಝೀರ್ ಅವರು ಉದ್ಘಾಟಿಸಿ ಲೋಕಾರ್ಪಣೆಗೊಳಿಸಿದರು.
ಎಕ್ಸಲೆಂಟ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಯುವರಾಜ್ ಜೈನ್ ಅವರು ಅಧ್ಯಕ್ಷತೆ ವಹಿಸಿದ್ದರು.
ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಯವರು ಆಶೀರ್ವಚನ ನೀಡಿದರು.
ಮಾಜಿ ಸಚಿವ ಅಭಯಚಂದ್ರ ಅವರು ಅತಿಥಿಯಾಗಿ ಭಾಗವಹಿಸಿದ್ದರು.
ಸಂಸ್ಥೆಯ ಕಾರ್ಯದರ್ಶಿ ರಶ್ಮಿತಾ ಜೈನ್ ಅವರು ಸ್ವಾಗತಿಸಿ,ಪ್ರಾಂಶುಪಾಲರಾದ ಪ್ರದೀಪ್ ಕುಮಾರ್ ಶೆಟ್ಟಿ ಅವರು ವಂದಿಸಿದರು.ವಿಕ್ರಮ್ ನಾಯಕ್ ಹಾಗೂ ಡಾ.ವಾದಿರಾಜ ಕಲ್ಲೂರಾಯ ಕಾರ್ಯಕ್ರಮ ನಿರೂಪಿಸಿದರು.






