ಎಲ್ಲೆ ‘ಕಾಂತಾರಡೊಂಜಿ ಸುಗ್ಗಿದ ಗೊಬ್ಬು’

Picture of Namma Bedra

Namma Bedra

Bureau Report

ಕಾಂತಾವರ ಗೆಳೆಯರ ಬಳಗದ ವತಿಯಿಂದ ಹತ್ತನೇ ವರ್ಷದ ‘ಕಾಂತಾರಡೊಂಜಿ ಸುಗ್ಗಿದ ಗೊಬ್ಬು’ ಕಾರ್ಯಕ್ರಮ ನಾಳೆ ಬೆಳಿಗ್ಗೆ 8-30 ರಿಂದ ನಡೆಯಲಿದೆ ಎಂದು ಗೆಳೆಯರ ಬಳಗದ ಅಧ್ಯಕ್ಷ ಆಶಿಕ್ ಪೂಜಾರಿ ಅವರು ತಿಳಿಸಿದ್ದಾರೆ.
ರಾಜ್ಯ,ರಾಷ್ಟ್ರ ಪ್ರಶಸ್ತಿ ವಿಜೇತ ಶಿಕ್ಷಕ ವಿಠಲ ಬೇಲಾಡಿ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಕಾರ್ಯಕ್ರಮವನ್ನು ಕಾಂತಾವರ ಎಣ್ಣೆಕಳ ಶ್ರೀನಿವಾಸ ಭಟ್ ಉದ್ಘಾಟಿಸಲಿದ್ದಾರೆ.
ಸಾಹಿತಿ ಡಾ.ನಾ.ಮೊಗಸಾಲೆ, ಎಣ್ಣೆಕಳ ಕಾಂತಾವರ ಗುರುರಾಜ್ ಭಟ್ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಮಧ್ಯಾಹ್ನ 12 ಗಂಟೆಗೆ ನಡೆಯಲಿರುವ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಕ್ಷೇತ್ರ ಕಾಂತಾವರದ ಧರ್ಮದರ್ಶಿ ಜೀವಂಧರ ಬಲ್ಲಾಳ್ ಅವರು ಅಧ್ಯಕ್ಷತೆ ವಹಿಸಲಿದ್ದು ಕಾಂತಾವರ ದೇವಸ್ಥಾನದ ಪ್ರಧಾನ ಅರ್ಚಕರಾದ ಕೃಷ್ಣಮೂರ್ತಿ ಭಟ್ ಆಶೀರ್ವಚನ ನೀಡಲಿದ್ದಾರೆ.
ಶಾಸಕ,ಮಾಜಿ ಸಚಿವ ವಿ.ಸುನಿಲ್ ಕುಮಾರ್, ಮುನಿಯಾಲು ಉದಯಕುಮಾರ್ ಶೆಟ್ಟಿ ಸಹಿತ ಹಲವರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಬೇಲಾಡಿಬಾವ ಕಂಬಳಕೋಣಗಳ ಯಜಮಾನ ಅಶೋಕಾನಂದ ಶೆಟ್ಟಿ ಅವರಿಗೆ ಸನ್ಮಾನ ಕಾರ್ಯಕ್ರಮ, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ.
ಸಂಜೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಕಾಂತಾವರ ಗ್ರಾ‌.ಪಂ.ಅಧ್ಯಕ್ಷ ರಾಜೇಶ್ ಕೋಟ್ಯಾನ್ ಅಧ್ಯಕ್ಷತೆ ವಹಿಸಲಿದ್ದು ಅಂಬೋಡಿಮಾರ್ ರಘುನಾಥ ದೇವಾಡಿಗ,ಉದ್ಯಮಿ ಕಾರ್ಕಳ ದೀಕ್ಷಿತ್ ಜೈನ್ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಈ ಕಾರ್ಯಕ್ರಮದಲ್ಲಿ ಕಾಂತಾವರ, ಬೇಲಾಡಿ,ಬಾರಾಡಿ,ಬೋಳ,ಪಿಲಿಯೂರು ಗ್ರಾಮಸ್ಥರಿಗೆ ವಿವಿಧ ಸ್ಪರ್ಧೆಗಳು ನಡೆಯಲಿದ್ದು ಕಾರ್ಕಳ ತಾಲೂಕಿನ ಪುರುಷರ ತಂಡಗಳಿಗೆ ಹಗ್ಗಜಗ್ಗಾಟ ನಡೆಯಲಿದೆ ಎಂದು ಅಧ್ಯಕ್ಷ ಆಶಿಕ್ ಪೂಜಾರಿ ತಿಳಿಸಿದ್ದಾರೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

Scroll to Top