ಎಡ್ತೂರು ಜಗ್ಗಣ್ಣ. ಹಾಗಂತಲೇ ಈ ಜನ ಬಹಳ ಫೇಮಸ್.
ಕೊಳಕೆ ಇರ್ವತ್ತೂರು ಅಂದಾಕ್ಷಣ ನೆನಪಾಗೋದೇ ಭಾಸ್ಕರ ಸುಬ್ಬಯ್ಯ ಕೋಟ್ಯಾನ್ ಅವರ ಹೆಸರು.ಕಳೆದ ಹಲವು ವರ್ಷಗಳಿಂದ ಕಂಬಳ ಕ್ಷೇತ್ರದಲ್ಲಿ ದೊಡ್ಡ ಹೆಸರು ಮಾಡಿಕೊಂಡಿರುವ ಜಗ್ಗಣ್ಣನಿಗೆ ಈಬಾರಿ ಪ್ರತಿಷ್ಠಿತ ‘ಸಹಕಾರ ರತ್ನ’ ಪ್ರಶಸ್ತಿ ಬಂದಿದೆ.ಅದೆಷ್ಟೋ ಜನರ ಪಾಲಿಗೆ ಸಾಹುಕಾರರಂತಿರುವ ಭಾಸ್ಕರ ಕೋಟ್ಯಾನ್ ಅವರಿಗೆ ಈ ಪ್ರಶಸ್ತಿ ಲಭಿಸಿರುವುದು ಬೆಳುವಾಯಿ ಮಾತ್ರವಲ್ಲದೆ ಸಹಕಾರಿ ಕ್ಷೇತ್ರದಲ್ಲಿ ಸಂತಸ ತಂದಿದೆ.
ಈ ‘ಸಾಹುಕಾರ’ನಿಗೇಕೆ ‘ ಸಹಕಾರ ರತ್ನ’ ಪ್ರಶಸ್ತಿ ?
ಯಾಕೆಂದರೆ,,,,
ಅವರು ಸಹಕಾರಿ ಕ್ಷೇತ್ರದಲ್ಲಿ ದೊಡ್ಡ ಸಾಧನೆ ಮಾಡಿದ್ದಾರೆ.ಸಹಕಾರಿ ಕ್ಷೇತ್ರದಲ್ಲಿ ಕಳೆದ ಹಲವು ವರ್ಷಗಳಿಂದ ಮಾಡಿದ ಸೇವೆ ಮತ್ತು ಸಾಧನೆಗಳನ್ನು ಪರಿಗಣಿಸಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳಿ ನಿ.ಅವರು ಈ ಪ್ರಶಸ್ತಿ ನೀಡುತ್ತಿದ್ದಾರೆ.ಈದಿನ ಬೆಂಗಳೂರಿನಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಈ ಪ್ರಶಸ್ತಿಯನ್ನು ಪ್ರದಾನ ಮಾಡಲಿದ್ದಾರೆ.
ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ನಿರ್ದೇಶಕರಾಗಿರುವ ಭಾಸ್ಕರ ಕೋಟ್ಯಾನ್ ಅವರು ಬೆಳುವಾಯಿ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷರಾಗಿ, ಮೂಡುಬಿದಿರೆ ಭಾರತ್ ಸೌಹಾರ್ದ ಕ್ರೆಡಿಟ್ ಕೋ ಅಪರೇಟಿವ್ ಸೊಸೈಟಿಯ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ.
ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದಲ್ಲೂ ಸಾಕಷ್ಟು ಸೇವೆ ಸಲ್ಲಿಸಿರುವ ಅವರದ್ದು ಜನಪ್ರಿಯ ಹೆಸರು.






