ಶಿರ್ತಾಡಿ ಮೌಂಟ್ ಕಾರ್ಮೆಲ್ ಶಾಲೆಯ ವಾರ್ಷಿಕೋತ್ಸವ

Picture of Namma Bedra

Namma Bedra

Bureau Report

‘ನಮ್ಮ ಶಿಕ್ಷಣ ವ್ಯವಸ್ಥೆಯು ಆರ್ಥಿಕ ದೃಷ್ಟಿಕೋನವನ್ನು ಬದಿಗಿಟ್ಟು ಗುಣಮಟ್ಟ, ಮೌಲ್ಯಾಧಾರಿತ ಶಿಕ್ಷಣವನ್ನು ನೀಡುವಲ್ಲಿ ಪ್ರಮುಖ ಆದ್ಯತೆಯನ್ನು ನೀಡುತ್ತಿದೆ’ ಎಂದು ಮಂಗಳೂರು ಕ್ಯಾಥೊಲಿಕ್ ಬೋರ್ಡ್ ಆಫ್ ಎಜುಕೇಶನ್ ನ ಕಾರ್ಯದರ್ಶಿ ವಂದನೀಯ ಸ್ವಾಮಿ ಡಾ.ಪ್ರವೀಣ್ ಲಿಯೋ ಲಸ್ರಾದೋ ಅವರು ಹೇಳಿದರು.
ಶಿರ್ತಾಡಿ ಮೌಂಟ್ ಕಾರ್ಮೆಲ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ವಾರ್ಷಿಕೋತ್ಸವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.


ಶಾಲಾ ಜೊತೆ ಕಾರ್ಯದರ್ಶಿ, ಶಿರ್ತಾಡಿ ಚರ್ಚ್ ಧರ್ಮಗುರುಗಳಾದ ವಂದನೀಯ ಸ್ವಾಮಿ ಹೆರಾಲ್ಡ್ ಮಸ್ಕರೇನಸ್, ಕ್ಷೇತ್ರ ಶಿಕ್ಷಣ ಸಂಯೋಜಕರಾದ ರಾಜೇಶ್ ಭಟ್,ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ನವೀನ್ ಆರ್.ಪುತ್ರನ್, ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತರಾದ ಸತೀಶ್ ಕೆ.ಕಾಶಿಪಟ್ಣ ಅವರು ಅತಿಥಿಗಳಾಗಿ ಭಾಗವಹಿಸಿ ಶುಭ ಹಾರೈಸಿದರು.
ಶಾಲಾ ಮುಖ್ಯೋಪಾಧ್ಯಾಯಿನಿ ಬಿಂದು ಮ್ಯಾಕ್ಸಿಮ್‌ ಡಿಸೋಜ ಹಾಗೂ ಆಡಳಿತ ಮಂಡಳಿಯ ಸರ್ವ ಸದಸ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಶ್ರೀಮತಿ ಶಾಲಿನಿ ಅವರು ಸ್ವಾಗತಿಸಿ ಶ್ರೀಮತಿ ಸುಪ್ರಿಯಾ ಅವರು ವಂದಿಸಿದರು. ಶ್ರೀಮತಿ ಪ್ರಿಯಾ ಹಾಗೂ ಪ್ರಿನ್ಸಿಯಾ ಕಾರ್ಯಕ್ರಮ ನಿರೂಪಿಸಿದರು.
ಸಭಾ ಕಾರ್ಯಕ್ರಮದ ಬಳಿಕ ಶಾಲಾ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.

ಈ ರೀತಿಯ ಇನ್ನಷ್ಟು ಸುದ್ದಿಗಳು

Scroll to Top