ಮೂಡುಬಿದಿರೆ: ವಿದ್ಯಾರ್ಥಿಗಳು ಪಠ್ಯ ಅಧ್ಯಯನದ ಜೊತೆಗೆ ಪಠ್ಯತರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವುದರಿಂದ ಸೃಜನಶೀಲತೆ, ನಾಯಕತ್ವ ಗುಣಗಳು ಹಾಗೂ ಸಾಮಾಜಿಕ ಹೊಣೆಗಾರಿಕೆ ಬೆಳೆಸಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಪ್ರಸನ್ನ ಜೋಯೆಲ್ ಸಿಕ್ವೆರಾ ಹೇಳಿದರು.

ಶಿರ್ತಾಡಿ ಹೋಲಿ ಎಂಜಲ್ಸ್ ಪ್ರಾಥಮಿಕ ಶಾಲೆಯಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾನಿಲಯ ವ್ಯಾಪ್ತಿಯ ಮಿಲಾಗ್ರಿಸ್ ಕಾಲೇಜು ರಾಷ್ಟ್ರೀಯ ಸೇವಾ ಯೋಜನೆ (ಎನ್ಎಸ್ಎಸ್) ಘಟಕದ 2025-26ನೇ ಸಾಲಿನ ವಾರ್ಷಿಕ ವಿಶೇಷ ಶಿಬಿರದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಉದ್ಯಮಿ ಅಲ್ವಿನ್ ಪ್ರಕಾಶ್ ಡಿಸೋಜಾ, ಚರ್ಚ್ ಪಾಲನಾ ಮಂಡಳಿ ಉಪಾಧ್ಯಕ್ಷ ಆಸ್ಟಿನ್ ಡಿಸೋಜಾ ಹಾಗೂ ಕೃಷಿಕ ವಿವಿಯನ್ ಪಿಂಟೋ ಉಪಸ್ಥಿತರಿದ್ದರು.
ಶಿಬಿರದ ಸಂಯೋಜಕ ಜೋಯೆಲ್ ಮಸ್ಕರೆನ್ಹಾಸ್ ಅತಿಥಿಗಳಿಗೆ ಸ್ಮರಣಿಕೆಗಳನ್ನು ನೀಡಿ ಗೌರವಿಸಿದರು.
ಕಾರ್ಯಕ್ರಮದಲ್ಲಿ ಜಿಂಟೋ ಜೇಮ್ಸ್ ಸ್ವಾಗತಿಸಿದರು. ರಕ್ಷಾ ಕಾರ್ಯಕ್ರಮ ನಿರ್ವಹಿಸಿದರು. ಗಣನ್ಯ ವಂದಿಸಿದರು.










