ಮೂಡುಬಿದಿರೆಯಲ್ಲಿ ಕಳೆದ ಕೆಲ ವರ್ಷಗಳಲ್ಲಿ ಕಂದಾಯ ನಿರೀಕ್ಷಕರಾಗಿ ಸೇವೆ ಸಲ್ಲಿಸಿರುವ ಹೆಚ್.ಬಿ.ಮಂಜುನಾಥ್ ಅವರು ಮೂಲ್ಕಿಗೆ ವರ್ಗಾವಣೆಗೊಂಡಿದ್ದಾರೆ.
ಮೂಲ್ಕಿಯಲ್ಲಿ ಆಹಾರ ನಿರೀಕ್ಷಕರಾಗಿ ವರ್ಗಾವಣೆಗೊಂಡಿದ್ದು ಮೂಡುಬಿದಿರೆಯ ಕಂದಾಯ ನಿರೀಕ್ಷಕರಾಗಿ ಆಹಾರ ನಿರೀಕ್ಷಕರಾಗಿರುವ ರವಿಪ್ರಸಾದ್ ಮಲ್ಯ ಅವರು ಅಧಿಕಾರ ಸ್ವೀಕರಿಸಲಿದ್ದಾರೆ.
ಮೂಡುಬಿದಿರೆಯಲ್ಲಿ ಕಂದಾಯ ನಿರೀಕ್ಷಕರಾಗಿ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಿರುವ ಮಂಜುನಾಥ್ ಅವರು ಸರ್ವ ಜನರ ಮೆಚ್ಚುಗೆಗೆ ಪಾತ್ರರಾಗಿದ್ದರು.











