ಫೆ.28: ಕರಿಂಜೆ ಸೇವಾ ಸಹಕಾರಿ ಸಂಘದ ಶತಮಾನೋತ್ಸವ ಸಮಾರೋಪ

Picture of Namma Bedra

Namma Bedra

Bureau Report

ಕರಿಂಜೆ ಸೇವಾ ಸಹಕಾರಿ ಸಂಘದ ಶತಮಾನೋತ್ಸವ ಸಮಾರೋಪ ಸಮಾರಂಭವು ಫೆ.28 ರಂದು ಸಂಜೆ 5-30 ಕ್ಕೆ ನೆತ್ತೋಡಿ- ಮಾರೂರಿನ ಎ.ಪಿ.ಗಾರ್ಡನ್ ನಲ್ಲಿ ನಡೆಯಲಿದೆ ಎಂದು ಸಂಘದ ಅಧ್ಯಕ್ಷರಾದ ಅಶ್ವಿನ್ ಜೊಸ್ಸಿ ಪಿರೇರಾ ಅವರು ತಿಳಿಸಿದ್ದಾರೆ.
ಸಹಕಾರ ರತ್ನ ಡಾ|ಎಂ.ಎನ್.ರಾಜೇಂದ್ರ ಕುಮಾರ್ ಅವರು ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.
ಅಶ್ವಿನ್ ಜೊಸ್ಸಿ ಪಿರೇರಾ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಸಂಸದ ಕ್ಯಾ.ಬ್ರಿಜೇಶ್ ಚೌಟ ಅವರು ಸ್ಮರಣ ಸಂಚಿಕೆ ಬಿಡುಗಡೆಗೊಳಿಸಲಿದ್ದಾರೆ, ಶಾಸಕ ಉಮಾನಾಥ ಕೋಟ್ಯಾನ್, ಮಾಜಿ ಸಚಿವ ಕೆ.ಅಭಯಚಂದ್ರ, ಕರ್ನಾಟಕ ಪರಿಸರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಾದ ಶ್ರೀಮತಿ ಶಾಲೆಟ್ ಪಿಂಟೊ ಅವರು ಸಹಾಯಹಸ್ತ ವಿತರಣೆ ಮಾಡಲಿದ್ದಾರೆ.


ದ.ಕ.ಜಿಲ್ಲಾ ಸಹಕಾರಿ ಯೂನಿಯನ್ ನ ಅಧ್ಯಕ್ಷರಾದ ಶಶಿಕುಮಾರ್ ರೈ ಬಾಲ್ಯೊಟ್ಟು,ದ‌ಕ.ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕರಾದ ಎಚ್.ಎನ್.ರಮೇಶ್,ಮಂಗಳೂರು ವಿಭಾಗ ಸಹಕಾರ ಸಂಘಗಳ ಸಹಾಯಕ ನಿಬಂಧಕರಾದ ಶ್ರೀಮತಿ ತ್ರಿವೇಣಿ, ತಾಕೊಡೆ ಪವಿತ್ರ ಶಿಲುಬೆಯ ದೇವಾಲಯದ ಧರ್ಮಗುರುಗಳಾದ ರೆ.ಫಾ.ರೋಹನ್ ಲೋಬೋ, ಹನ್ನೆರಡುಕವಲು ಪಂಚಲಿಂಗೇಶ್ವರ ದೇವಸ್ಥಾನದ ಮೊಕ್ತೇಸರರಾದ ಸದಾಶಿವ ಭಟ್ ಹಾಗೂ ಪುಚ್ಚೆಮೊಗರು ಜುಮ್ಮಾ ಮಸೀದಿಯ ಖತೀಬರಾದ ಮುಹಮ್ಮದ್ ಹುಸೈನ್ ಸಖಾಫಿ ಅಲ್ ಫುರ್ಖಾನಿ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆಂದು ಸಂಘದ ಅಧ್ಯಕ್ಷ ಅಶ್ವಿನ್ ಜೊಸ್ಸಿ ಪಿರೇರಾ,ಉಪಾಧ್ಯಕ್ಷ ಎಡ್ವಿನ್ ಡಿಸೋಜ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಫ್ರಾನ್ಸಿಸ್ ಮೆಂಡೋನ್ಸ ಅವರು ತಿಳಿಸಿದ್ದಾರೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

Scroll to Top