ಮೂಡುಬಿದಿರೆ ತಾಲೂಕು ಪಂಚಗ್ಯಾರಂಟಿ ಅನುಷ್ಠಾನ ಸಮಿತಿ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವತಿಯಿಂದ ನಾಳೆ ಬೆಳಿಗ್ಗೆ 11 ಗಂಟೆಗೆ ಸರಕಾರದ ಪಂಚಗ್ಯಾರಂಟಿ ಯೋಜನೆಗಳ ಕುರಿತು ಮಹಿಳೆಯರಿಗೆ ಅರಿವು ಮೂಡಿಸುವ ಸಲುವಾಗಿ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಾಲೂಕು ಪಂಚ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಅರುಣ್ ಕುಮಾರ್ ಶೆಟ್ಟಿ ಅವರು ತಿಳಿಸಿದ್ದಾರೆ.
ಗ್ಯಾರಂಟಿ ಯೋಜನಾ ಸಮಿತಿಯ ಕಚೇರಿಯಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಆಳ್ವಾಸ್ ಕಾಲೇಜಿನ ಸಮಾಜ ಕಾರ್ಯ ವಿಭಾಗದ ಮುಖ್ಯಸ್ಥರಾದ ಡಾ.ಮಧುಮಾಲಾ ಕೆ.ಅವರು ಮಹಿಳಾ ಸಬಲೀಕರಣದ ಕುರಿತು ಉಪನ್ಯಾಸ ನೀಡಲಿದ್ದಾರೆ.
ಮೂಡುಬಿದಿರೆ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಕುಸುಮಾಧರ ಬಿ, ಮಂಗಳೂರು ಗ್ರಾಮಾಂತರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶ್ರೀಮತಿ ಶೈಲಾ ಕೆ.ಕಾರಿಗಿ ಅವರು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಅರುಣ್ ಕುಮಾರ್ ಶೆಟ್ಟಿ ತಿಳಿಸಿದ್ದಾರೆ.





