ಜಮೀಯತುಲ್ ಫಲಾಹ್ ವತಿಯಿಂದ ಉಚಿತ ವೈದ್ಯಕೀಯ ಹಾಗೂ ದಂತ ಚಿಕಿತ್ಸಾ ಶಿಬಿರ

Picture of Namma Bedra

Namma Bedra

Bureau Report

ಜಮೀಯತುಲ್ ಫಲಾಹ್ ಮೂಡುಬಿದಿರೆ ತಾಲೂಕು ಘಟಕದ ಆಯೋಜನೆಯಲ್ಲಿ ದೇರಳಕಟ್ಟೆ ಯೆನಪೋಯ (ಪರಿಗಣಿಸಲ್ಪಟ್ಟ ವಿ‌ವಿ)ಇದರ ಗ್ರಾಮೀಣ ಆರೋಗ್ಯ ಮತ್ತು ರಕ್ಷಣೆ ಅಭಿವೃದ್ಧಿ ಕೇಂದ್ರ ಹಾಗೂ ಯೆನಪೋಯ ದಂತ ಕಾಲೇಜು ಮತ್ತು ಆಸ್ಪತ್ರೆಯ ಸಮುದಾಯ ದಂತ ಆರೋಗ್ಯ ವಿಭಾಗದ ಸಹಯೋಗದಲ್ಲಿ ಉಚಿತ ವೈದ್ಯಕೀಯ ಹಾಗೂ ದಂತ ಚಿಕಿತ್ಸಾ ಶಿಬಿರವು ಕಾಶಿಪಟ್ಣ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.


ಪೆರಾಡಿ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಬ್ಯಾಂಕ್ ನ ಅಧ್ಯಕ್ಷರಾದ ಸತೀಶ್ ಕೆ.ಕಾಶಿಪಟ್ಣ ಅವರು ಶಿಬಿರವನ್ನು ಉದ್ಘಾಟಿಸಿ‌ ಶುಭ ಹಾರೈಸಿದರು.
ಜಮೀಯತುಲ್ ಫಲಾಹ್ ಮೂಡುಬಿದಿರೆ ತಾಲೂಕು ಘಟಕದ ಅಧ್ಯಕ್ಷರಾದ ಶೇಖ್ ನೂರುದ್ದೀನ್ ಅವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ‌ಕಾಶಿಪಟ್ಣ ಮಸೀದಿ ಕಮಿಟಿಯ ಅಧ್ಯಕ್ಷರಾದ ಪುತ್ತುಮೋನು,ಗರಡಿ ಫ್ರೆಂಡ್ಸ್ ಅಧ್ಯಕ್ಷ ಮನೋಜ್ ಕೆ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ವಿದ್ಯಾನಂದ,ಮುಖ್ಯ ಶಿಕ್ಷಕಿ ವಸುಧಾ ಭಟ್ ಹಾಗೂ ಹಮೀದ್ ಕಾಶಿಪಟ್ಣ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ಯೆನಪೋಯ ದಂತ ಕಾಲೇಜಿನ ಸಾರ್ವಜನಿಕ ದಂತ ಆರೋಗ್ಯ ವಿಭಾಗದ ನಿರ್ದೇಶಕರಾದ ಡಾ.ಅಝೀಝ್ ಹಾಗೂ ಶ್ರೀಮತಿ ಗಾಯತ್ರಿ ಅವರು ಶಿಬಿರದ ಕುರಿತು ಮಾಹಿತಿ ನೀಡಿದರು.
ಜಮೀಯತುಲ್ ಫಲಾಹ್ ನ ಹಿರಿಯ ಸದಸ್ಯರಾದ ಅಬ್ದುಲ್ ರವೂಫ್ ಮತ್ತು ಮುಹಮ್ಮದ್ ಶಾಕಿರ್ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಕಾರ್ಯದರ್ಶಿ ಅಶ್ರಫ್ ಮರೋಡಿ ಸ್ವಾಗತಿಸಿ ಪ್ರಾಸ್ತಾವಿಕವಾಗಿ‌ ಮಾತನಾಡಿದರು. ಖಜಾಂಚಿ ಶೈಖ್ ಅಬ್ದುಲ್ ಗಫೂರ್ ವಂದಿಸಿದರು.
40 ಕ್ಕೂ ಹೆಚ್ಚು ವೈದ್ಯರ ತಂಡ ಈ ಶಿಬಿರದಲ್ಲಿ ಭಾಹವಹಿಸಿದ್ದು ಸುಮಾರು 150 ಕ್ಕಿಂತಲೂ ಹೆಚ್ಚು ಮಂದಿ ಈ ಶಿಬಿರದ ಪ್ರಯೋಜನ ಪಡೆದರು.

ಈ ರೀತಿಯ ಇನ್ನಷ್ಟು ಸುದ್ದಿಗಳು

Scroll to Top