ಮೈಸೂರಿನ ಪ್ರತಿಷ್ಠಿತ ಬಂಟರ ಸಂಘದ ಚಾರಿಟೇಬಲ್ ಟ್ರಸ್ಟ್ ನ ಡೆಪ್ಯುಟಿ ಮ್ಯಾನೇಜಿಂಗ್ ಟ್ರಸ್ಟಿಯಾಗಿ ನಿಡ್ಡೋಡಿ ಚಾವಡಿಮನೆ ಡಾ.ಜಗನ್ನಾಥ ಶೆಟ್ಟಿ ಅವರು ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ.
ಜಗನ್ನಾಥ ಶೆಟ್ಟಿ ಅವರು ಕಿನ್ನಿಗೋಳಿಯ ಸ್ವಾಮಿ ವಿವೇಕಾನಂದ ಸೇವಾ ಟ್ರಸ್ಟ್ ನ ಅಧ್ಯಕ್ಷರಾಗಿ ಹಲವಾರು ಸಮಾಜಮುಖಿ ಕಾರ್ಯಕ್ರಮಗಳನ್ನು ಮಾಡುತ್ತಾ ವಿವಿಧ ಕ್ಷೇತ್ರಗಳ ಸಾಧಕರನ್ನು ಗುರುತಿಸಿ ಗೌರವಿಸುವ ಕೆಲಸಗಳನ್ನು ಮಾಡುತ್ತಾ ಬಂದಿದ್ದಾರೆ.
ವಿವಿಧ ಧಾರ್ಮಿಕ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿ ಸಕ್ರಿಯರಾಗಿ ತನ್ನದೇ ಆದ ಸೇವಾ ಕಾರ್ಯಗಳನ್ನು ಮಾಡುತ್ತಿದ್ದಾರೆ.











