ಎ.19 ರಂದು ಆತ್ಮಶಕ್ತಿ ಸಹಕಾರಿ ಸಂಘದ ಮೂಡುಬಿದಿರೆ ಶಾಖೆ ಉದ್ಘಾಟನೆ

Picture of Namma Bedra

Namma Bedra

Bureau Report

ಮಂಗಳೂರಿನ ಪಡೀಲ್ ನಲ್ಲಿ ಸ್ವಂತ ಆಡಳಿತ ಕಟ್ಟಡವನ್ನು ಹೊಂದಿರುವ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಈಗಾಗಲೇ ದ.ಕ.ಮತ್ತು ಉಡುಪಿ ಜಿಲ್ಲೆಯಾದ್ಯಂತ 34 ಶಾಖೆಗಳನ್ನು ಹೊಂದಿದ್ದು 35 ನೇ ಶಾಖೆ ಮೂಡುಬಿದಿರೆಯಲ್ಲಿ ಎ.19ರಂದು ಮೂಡುಬಿದಿರೆಯ ಅಂಚೆಕಚೇರಿಯ ಎದುರುಗಡೆಯ ರಾಮಯ್ಯ ಕಾಂಪ್ಲೆಕ್ಸ್ ನಲ್ಲಿ ಉದ್ಘಾಟನೆಗೊಳ್ಳಲಿದೆ ಎಂದು ಸಂಘದ ಅಧ್ಯಕ್ಷ ಚಿತ್ತರಂಜನ್ ಬೋಳಾರ್ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಮೂಡುಬಿದಿರೆ ಪ್ರೆಸ್ ಕ್ಲಬ್ ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಸಂಸ್ಥೆ ಬೆಳೆದು ಬಂದ ಹಾದಿ, ಕೈಗೊಂಡ ಸಮಾಜಮುಖಿ ಕಾರ್ಯಗಳು, ಅಶಕ್ತರಿಗೆ,ಬಡ ವಿದ್ಯಾರ್ಥಿಗಳಿಗೆ ನೀಡಿದ ನೆರವು,ಆರೋಗ್ಯ ಶಿಬಿರಗಳ ಸಹಿತ ಆಯೋಜಿಸಿರುವ ಸಮಾಜಸೇವಾ ಕೆಲಸಗಳ ಕುರಿತು ಹಾಗೂ ಶಾಖೆಗಳು, ಸಿಬ್ಬಂದಿಗಳ ಕುರಿತು ಮಾಹಿತಿ ನೀಡಿದರು.
ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಅಧ್ಯಕ್ಷರಾದ ಡಾ.ಎಮ್.ಎನ್.ರಾಜೇಂದ್ರ ಕುಮಾರ್ ಅವರು ನೂತನ ಶಾಖೆಯನ್ನು ಉದ್ಘಾಟಿಸಲಿದ್ದಾರೆ.
ಸಂಘದ ಅಧ್ಯಕ್ಷರಾದ ಚಿತ್ತರಂಜನ್ ಬೋಳಾರ್ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಭಾ ಕಾರ್ಯಕ್ರಮದಲ್ಲಿ ಶಾಸಕ ಉಮಾನಾಥ ಕೋಟ್ಯಾನ್ ಅವರು ದೀಪ ಪ್ರಜ್ವಲನೆ ಮಾಡಲಿದ್ದಾರೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

Scroll to Top