ಮೂಡುಬಿದಿರೆ ತಾಲೂಕು ಜನಜಾಗೃತಿ ವೇದಿಕೆಯ 2026-28 ನೇ ಸಾಲಿನ ನೂತನ ಅಧ್ಯಕ್ಷರಾಗಿ ಮಿತ್ತಬೈಲು ವಾಸುದೇವ ನಾಯಕ್ ಅವರು ಆಯ್ಕೆಯಾಗಿದ್ದಾರೆ.
ಬುಧವಾರ ಸಮಾಜ ಮಂದಿರದಲ್ಲಿ ನಡೆದ ಸಭೆಯಲ್ಲಿ ಈ ಆಯ್ಕೆ ನಡೆದಿದ್ದು ನಾಯಕ್ ಅವರು ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ.
ವೇದಿಕೆಯ ಪದಾಧಿಕಾರಿಗಳ ಸಭೆಯನ್ನು ಮಾಜಿ ಸಚಿವ ಕೆ.ಅಭಯಚಂದ್ರ ಅವರು ಉದ್ಘಾಟಿಸಿ ಶುಭ ಹಾರೈಸಿದರು.
ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ವಾಸುದೇವ ನಾಯಕ್ ಅವರು ಎಪಿಎಂಸಿ ಸದಸ್ಯರಾಗಿ, ಕೆಡಿಪಿ ಸದಸ್ಯರಾಗಿ ಸೇವೆ ಸಲ್ಲಿಸಿದ್ದು ಪ್ರಸ್ತುತ ಮೂಡುಬಿದಿರೆ ತಾಲೂಕು ಅಕ್ರಮ ಸಕ್ರಮ ಸಮಿತಿಯ ಸದಸ್ಯರಾಗಿದ್ದಾರೆ.ಕಳೆದ ಹಲವಾರು ವರ್ಷಗಳಿಂದ ರಾಜಕೀಯ ಮುಖಂಡನಾಗಿ, ಸಾಮಾಜಿಕ, ಶೈಕ್ಷಣಿಕ ಹಾಗೂ ಧಾರ್ಮಿಕ ಕ್ಷೇತ್ರಗಳಲ್ಲಿ ತನ್ನನ್ನು ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.











