ಮೂಡುಬಿದಿರೆ ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ವತಿಯಿಂದ ಮೂಡುಬಿದಿರೆಯ ಸಮಾಜ ಮಂದಿರದಲ್ಲಿ ‘ ಗೃಹಲಕ್ಷ್ಮಿ ಕೋಟಿ ಸಂಭ್ರಮ’ ಎಂಬ ವಿನೂತನ ಕಾರ್ಯಕ್ರಮ ನಡೆಯಲಿದೆ.
ಈ ಸಂದರ್ಭದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ( ಆಯುರ್ವೇದ) ನಡೆಯಲಿದ್ದು ಇದರ ಜೊತೆಗೆ ಭಾಗವಹಿಸುವ ಮಹಿಳೆಯರಿಗೆ ಉಚಿತ ಲಕ್ಕಿಡಿಪ್ ಕೂಪನ್ ನೀಡಲಾಗುತ್ತದೆ. ಇದರಲ್ಲಿ ವಿಜೇತರಾದ 10 ಮಂದಿಗೆ ಸೀರೆಯ ಬಹುಮಾನ ನೀಡಲಾಗುತ್ತದೆ.
ಗ್ಯಾರಂಟಿ ಯೋಜನೆಯ ಜಿಲ್ಲಾಧ್ಯಕ್ಷ ಭರತ್ ಮುಂಡೋಡಿ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಮಂಜುನಾಥ ಭಂಡಾರಿ, ಮಾಜಿ ಸಚಿವ ಕೆ.ಅಭಯಚಂದ್ರ, ಮಿಥುನ್ ರೈ,ಪದ್ಮರಾಜ್ ಪೂಜಾರಿ, ಸುಚರಿತ ಶೆಟ್ಟಿ, ಪ್ರವೀಣ್ ಕುಮಾರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿಯ ಅಧ್ಯಕ್ಷ ಅರುಣ್ ಕುಮಾರ್ ಶೆಟ್ಟಿ ಅವರು ತಿಳಿಸಿದ್ದಾರೆ.






