ದ.ಕ, ಉಡುಪಿ ಹಾಗೂ ಕಾಸರಗೋಡು ಜಿಲ್ಲೆಗಳ ವ್ಯಾಪ್ತಿಯ ಜಿಲ್ಲಾ ಕಂಬಳ ಸಮಿತಿಯ ನೂತನ ಅಧ್ಯಕ್ಷರಾಗಿ ಮೂಡುಬಿದಿರೆ ಹೊಸಬೆಟ್ಟು ಏರಿಮಾರು ಬರ್ಕೆಯ ಚಂದ್ರಹಾಸ ಸನಿಲ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಕಳೆದ ಹಲವು ವರ್ಷಗಳಿಂದ ಕಂಬಳ ಕ್ಷೇತ್ರದಲ್ಲಿ ತನ್ನದೇ ಆದ ಸಾಧನೆಗಳನ್ನು ಮಾಡಿರುವ ಚಂದ್ರಹಾಸ ಸನಿಲ್ ಅವರು ಕಂಬಳ ಕ್ಷೇತ್ರದಲ್ಲಿ ದೊಡ್ಡ ಹೆಸರು ಮಾಡಿದ್ದಾರೆ.
ಹೊಸಬೆಟ್ಟು ಪಂಚಾಯತ್ ಸದಸ್ಯರಾಗಿ, ಅಧ್ಯಕ್ಷರಾಗಿ, ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ರಾಜಕೀಯ ಕ್ಷೇತ್ರದಲ್ಲಿ ಸೇವೆಸಲ್ಲಿಸಿದ್ದರೆ ಧಾರ್ಮಿಕ ಕ್ಷೇತ್ರದಲ್ಲೂ ಅವರು ಸೇವೆ ಸಲ್ಲಿಸಿದ್ದಾರೆ.
ಅವರ ಈ ಆಯ್ಕೆ ಅವರ ಅಭಿಮಾನಿಗಳು ಮತ್ತು ಮೂಡುಬಿದಿರೆ ಪರಿಸರಕ್ಕೆ ಸಂತಸ ತಂದಿದೆ.






