ಬೆದ್ರ ಅರಣ್ಯ ಇಲಾಖಾಧಿಕಾರಿಗಳಿಗೆ ಸೆಂಡಪ್

Picture of Namma Bedra

Namma Bedra

Bureau Report

ಅರಣ್ಯ ಇಲಾಖೆ ಮೂಡುಬಿದಿರೆ ಉಪವಿಭಾಗದಲ್ಲಿ ಸೇವೆ ಸಲ್ಲಿಸಿ ವಯೋ ನಿವೃತ್ತಿ, ಪದೋನ್ನತಿ, ವರ್ಗಾವಣೆಗೊಂಡ ಅಧಿಕಾರಿಗಳಿಗೆ ಬೀಳ್ಕೊಡುಗೆ ಸಮಾರಂಭವು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶ್ರೀಧರ್ ಪಿ.ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ವಯೋನಿವೃತ್ತಿ ಹೊಂದಿದ ಗಸ್ತು ಅರಣ್ಯ ಪಾಲಕ ಶಂಕರ್ ಗೌಡ, ಕಂಪ್ಯೂಟರ್ ನಿರ್ವಾಹಕಿ ಉಷಾ ಶೆಟ್ಟಿ , ವಾಹನ ಚಾಲಕ ಚಂದ್ರಯ್ಯ ಆಚಾರಿ, ಮಂಗಳೂರು ವಲಯಾರಣ್ಯಾಧಿಕಾರಿಯಾಗಿ ಪದೋನ್ನತಿ ಹೊಂದಿರುವ ಮಂಜುನಾಥ ಗಾಣಿಗ, ಕುದುರೆಮುಖ ವನ್ಯಜೀವಿ ವಿಭಾಗಕ್ಕೆ ವರ್ಗಾವಣೆಗೊಂಡಿರುವ ಪ್ರಭಾಕರ ಕುಲಾಲ್,ಮೂಡುಬಿದಿರೆ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಕಚೇರಿಗೆ ವರ್ಗಾವಣೆಗೊಂಡಿರುವ ಪ್ರಥಮ ದರ್ಜೆ ಸಹಾಯಕ ಜಯರಾಮ್ ಪಿ.ಎನ್, ಹಾಗೂ ಕುದುರೆಮುಖ ವನ್ಯಜೀವಿ ವಿಭಾಗಕ್ಕೆ ವರ್ಗಾವಣೆಗೊಂಡಿರುವ ಕಾರ್ಕಳ ವನ್ಯಜೀವಿ ವಲಯದ ಗಸ್ತು ಅರಣ್ಯಪಾಲಕಿ ಸ್ಚರ್ಣ ನಾಯಕ್ ಅವರನ್ನು ಸನ್ಮಾನಿಸಿ ಬೀಳ್ಕೊಡಲಾಯಿತು.
ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸತೀಶ್ ಆಚಾರಿ,ಕಾರ್ಕಳ ವನ್ಯಜೀವಿ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ದಿನೇಶ್ ಜಿ.ಡಿ ಅವರು ಅತಿಥಿಗಳಾಗಿ ಭಾಗವಹಿಸಿ ಶುಭಹಾರೈಸಿದರು.
ಮೂಡುಬಿದಿರೆ ವಲಯಾರಣ್ಯಾಧಿಕಾರಿ ಕಿರಣ್ ಕುಮಾರ್ ಸ್ವಾಗತಿಸಿದರು. ರಾಘವೇಂದ್ರ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

ಈ ರೀತಿಯ ಇನ್ನಷ್ಟು ಸುದ್ದಿಗಳು

Scroll to Top