ಜಿಲ್ಲಾ ಕಂಬಳ ಸಮಿತಿಯ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ, ಯುವ ನಾಯಕ ಚಂದ್ರಹಾಸ ಸನಿಲ್ ಅವರನ್ನು ಯುವನಾಯಕ, ಕೆಪಿಸಿಸಿ ಕಾರ್ಯದರ್ಶಿ ಮಿಥುನ್ ರೈ ಅವರು ಮೂಡುಬಿದಿರೆ ಕಾಂಗ್ರೆಸ್ ಕಚೇರಿಯಲ್ಲಿ ಸನ್ಮಾನಿಸಿ ಅಭಿನಂದಿಸಿದರು.
ಜಿಲ್ಲಾ ಕಂಬಳ ಸಮಿತಿಯು ಇದೇ ಮೊದಲ ಬಾರಿಗೆ ಓರ್ವ ಯುವಕನನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದೆ. ಸನಿಲ್ ಅವರು ಕಂಬಳ ಕ್ಷೇತ್ರದಲ್ಲಿ ಕೆಲವು ಸಾಧನೆಗಳನ್ನು ಮಾಡಿದ್ದಾರೆ.

ಮಿಥುನ್ ರೈ ಅವರು ಮೂಡುಬಿದಿರೆ ಕಾಂಗ್ರೆಸ್ ಕಚೇರಿಯಲ್ಲಿ ಸನಿಲ್ ಅವರನ್ನು ಅಭಿನಂದಿಸುವ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರವೀಣ್ ಕುಮಾರ್, ಯುವ ಕಾಂಗ್ರೆಸ್ ಅಧ್ಯಕ್ಷ ಅನೀಶ್ ಡಿಸೋಜ, ವಕ್ತಾರ ರಾಜೇಶ್ ಕಡಲಕೆರೆ, ವಾಸುದೇವ ನಾಯಕ್ ಮತ್ತಿತರರು ಉಪಸ್ಥಿತರಿದ್ದರು.






