ದ.ಕ, ಉಡುಪಿ ಹಾಗೂ ಕಾಸರಗೋಡು ಜಿಲ್ಲೆಗಳನ್ನೊಳಗೊಂಡ ಜಿಲ್ಲಾ ಕಂಬಳ ಸಮಿತಿಯ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಜು.19 ಭಾನುವಾರ ಬೆಳಿಗ್ಗೆ 10 ಗಂಟೆಗೆ ಮೂಡುಬಿದಿರೆಯ ಸೃಷ್ಟಿ ಗಾರ್ಡನ್ ನಲ್ಲಿ ನಡೆಯಲಿದೆ ಎಂದು ಕಂಬಳ ಸಮಿತಿಯ ನೂತನ ಅಧ್ಯಕ್ಷ ಚಂದ್ರಹಾಸ ಸನಿಲ್ ಅವರು ತಿಳಿಸಿದ್ದಾರೆ.
ರಾಜ್ಯ ಕಂಬಳ ಅಸೋಸಿಯೇಷನ್ ಅಧ್ಯಕ್ಷ ಡಾ.ದೇವಿಪ್ರಸಾದ್ ಶೆಟ್ಟಿ ಬೆಳಪು, ಪ್ರಧಾನ ಕಾರ್ಯದರ್ಶಿ ವಿಜಯಕುಮಾರ್ ಕಂಗಿನಮನೆ, ಕೋಶಾಧಿಕಾರಿ ಲೋಕೇಶ್ ಶೆಟ್ಟಿ ಮುಚ್ಚೂರು ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಇದೇ ಸಂದರ್ಭದಲ್ಲಿ ಕಂಬಳ ದಿನಾಂಕ ನಿಗದಿ,ಕಂಬಳ ಸುಧಾರಣೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಕುರಿತು ಚರ್ಚೆ ನಡೆಯಲಿದೆ ಎಂದು ಸನಿಲ್ ತಿಳಿಸಿದ್ದಾರೆ.






