ರೋಟರಿ ಕ್ಲಬ್ ಮೂಡುಬಿದಿರೆಯ ಆಶ್ರಯದಲ್ಲಿ ‘ಆಟಿಡ್ ಒಂಜಿ ದಿನ’ ಕಾರ್ಯಕ್ರಮವು ಇಂದು ಸಂಜೆ 7 ಗಂಟೆಗೆ ಮೂಡುಬಿದಿರೆಯ ನಿಶ್ಮಿತಾ ಟವರ್ಸ್ ನಲ್ಲಿ ನಡೆಯಲಿದೆ.
ರೋಟರಿ ಸದಸ್ಯರ ತುಳುನಾಡ ಸಂಸ್ಕೃತಿ- ಸಂಭ್ರಮದ ಈ ಕಾರ್ಯಕ್ರಮದಲ್ಲಿ ಖ್ಯಾತ ಹಾಸ್ಯ ಕಲಾವಿದರಾದ ನವೀನ್ ಡಿ.ಪಡೀಲ್, ದೀಪಕ್ ರೈ ಪಾಣಾಜೆ ಹಾಗೂ ರೋಟರಿ ಜಿಲ್ಲಾ ಗವರ್ನರ್ ಸತೀಶ್ ಬೋಳಾರ್ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಸಭಾ ಕಾರ್ಯಕ್ರಮದ ಬಳಿಕ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು, ವಿವಿಧ ಸ್ಪರ್ಧೆಗಳು ನಡೆಯಲಿದೆ ಎಂದು ಕ್ಲಬ್ ಅಧ್ಯಕ್ಷರಾದ ಡಾ.ಆಶೀರ್ವಾದ್ ಹಾಗೂ ಕಾರ್ಯದರ್ಶಿ ಪ್ರಜ್ವಲ್ ಆಚಾರ್ ಅವರು ತಿಳಿಸಿದ್ದಾರೆ.










