ನಾಳೆ ಮೋದಿ ಜನ್ಮದಿನ: ಭಿನ್ನ ಸಾಮರ್ಥ್ಯದ ಮಕ್ಕಳೊಂದಿಗೆ ಹುಟ್ಟುಹಬ್ಬ ಆಚರಣೆ ಆಯೋಜಿಸಿದ ಚಾವಡಿಮನೆ ಜಗನ್ನಾಥ ಶೆಟ್ಟಿ

Picture of Namma Bedra

Namma Bedra

Bureau Report

ಪ್ರಧಾನಿ ನರೇಂದ್ರ ದಾಮೋದರದಾಸ್ ಮೋದಿ ಹುಟ್ಟುಹಬ್ಬವನ್ನು ಭಿನ್ನ ಸಾಮರ್ಥ್ಯದ ಮಕ್ಕಳೊಂದಿಗೆ ಆಚರಿಸಿಕೊಳ್ಳಲು ನಿಡ್ಡೋಡಿಯ ಚಾವಡಿಮನೆ ಜಗನ್ನಾಥ ಶೆಟ್ಟಿ ಅವರು ಅಧ್ಯಕ್ಷರಾಗಿರುವ ಸ್ವಾಮಿ ವಿವೇಕಾನಂದ ಸೇವಾ ಸಂಸ್ಥೆ ಸಿದ್ಧತೆ ನಡೆಸಿದ್ದು ಬೆಳುವಾಯಿಯ ಸ್ಪೂರ್ತಿ ಭಿನ್ನ ಸಾಮರ್ಥ್ಯದ ಮಕ್ಕಳ ಶಾಲೆಯಲ್ಲಿ ನಾಳೆ ಬೆಳಿಗ್ಗೆ 10-30 ಕ್ಕೆ ಕಾರ್ಯಕ್ರಮ ನಡೆಯಲಿದೆ.
ಜಗನ್ನಾಥ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಮೂಡುಬಿದಿರೆ ಎಂ.ಸಿ.ಎಸ್.ಬ್ಯಾಂಕ್ ನ ಅಧ್ಯಕ್ಷರಾಗಿರುವ ಎಂ.ಬಾಹುಬಲಿ ಪ್ರಸಾದ್ ಅವರು ಉದ್ಘಾಟಿಸಲಿದ್ದಾರೆ.
ಶಾಲೆಯ ಸಂಸ್ಥಾಪಕರಾದ ಪ್ರಕಾಶ್ ಜೆ‌.ಶೆಟ್ಟಿಗಾರ್ ಅವರು ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ,ಮಂಡಲಾಧ್ಯಕ್ಷ ದಿನೇಶ್ ಪುತ್ರನ್,ನಿಡ್ಡೋಡಿ ಜ್ಞಾನರತ್ನ ಎಜುಕೇಶನ್ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಭಾಸ್ಕರ ದೇವಸ್ಯ,ಬೆಳುವಾಯಿ ವಿದ್ಯಾವರ್ಧಕ ಸಂಘದ ಅಧ್ಯಕ್ಷ ರತ್ನಾಕರ ಶೆಟ್ಟಿ ಕಂಡಿಗ ಹಾಗೂ ಬೆಳುವಾಯಿ ಗ್ರಾ.ಪಂ.ಮಾಜಿ ಅಧ್ಯಕ್ಷ ಭಾಸ್ಕರ ಆಚಾರ್ಯ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

Scroll to Top