ವಾಲ್ಪಾಡಿ ಗ್ರಾಮ ಪಂಚಾಯತ್ ನ ಗ್ರೇಡ್-2 ಕಾರ್ಯದರ್ಶಿಯಾಗಿ ಮುಹಮ್ಮದ್ ಸಾದಿಕ್ ಅವರು ನೇಮಕಗೊಂಡು ಅಧಿಕಾರ ಸ್ವೀಕರಿಸಿದ್ದಾರೆ.
ಉಲ್ಲಾಳ ತಾಲೂಕು ಹರೇಕಳ ಗ್ರಾಮ ಪಂಚಾಯತ್ ನಲ್ಲಿ ಬಿಲ್ ಕಲೆಕ್ಟರ್ ಹುದ್ದೆಯಲ್ಲಿದ್ದ ಸಾದಿಕ್ ಅವರು ಗ್ರೇಡ್- 2 ಕಾರ್ಯದರ್ಶಿಯಾಗಿ ಮತ್ತು ಗ್ರಾಮೀಣಾಭಿವೃದ್ಧಿ ಸಹಾಯಕ ಹುದ್ದೆಗೆ ಪದೋನ್ನತಿ ಹೊಂದಿ ವಾಲ್ಪಾಡಿ ಪಂಚಾಯತ್ ಪಿಡಿಒ ಜಲಜಾ ಅವರಿಂದ ಅಧಿಕಾರ ಸ್ವೀಕರಿಸಿದ್ದಾರೆ.










