ಯುವವಾಹಿನಿ (ರಿ.) ಮೂಡುಬಿದಿರೆ ಘಟಕದ ಆತಿಥ್ಯ ಮತ್ತು ಕೇಂದ್ರ ಸಮಿತಿಯ ಆಶ್ರಯದಲ್ಲಿ ‘ಯುವವಾಹಿನಿ ಕ್ರೀಡೋತ್ಸವ- 2026’ ನಾಳೆ ಬೆಳಿಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಆಳ್ವಾಸ್ ಕಾಲೇಜು ಕ್ರೀಡಾಂಗಣದಲ್ಲಿ ನಡೆಯಲಿದೆ.
ಯುವವಾಹಿನಿ ಮೂಡುಬಿದಿರೆ ಘಟಕದ ಅಧ್ಯಕ್ಷ ಗಿರೀಶ್ ಕೋಟ್ಯಾನ್ ಮಾರೂರು ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಶಾಸಕ ಉಮಾನಾಥ ಕೋಟ್ಯಾನ್ ಅವರು ಉದ್ಘಾಟಿಸಲಿದ್ದು ಡಾ.ಎಂ.ಮೋಹನ ಆಳ್ವ ಅವರು ಕ್ರೀಡೋತ್ಸವಕ್ಕೆ ಚಾಲನೆ ನೀಡಲಿದ್ದಾರೆ.
ಸರ್ಜನ್ ಕಮಾಂಡರ್ ಡಾ.ಅರ್ಜುನ್ ಅವರು ಧ್ವಜವಂದನೆ ಸ್ವೀಕರಿಸಲಿದ್ದು,ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಸಹಿತ ಹಲವರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಪುರುಷರು ಮತ್ತು ಮಹಿಳೆಯರ ವಿಭಾಗದಲ್ಲಿ ವಿವಿಧ ಸ್ಪರ್ಧೆಗಳು ನಡೆಯಲಿದೆ ಎಂದು ಕ್ರೀಡಾ ನಿರ್ದೇಶಕ ಶಂಕರ್ ಎ.ಕೋಟ್ಯಾನ್ ಅವರು ತಿಳಿಸಿದ್ದಾರೆ.












