ಎ. ಜಿ. ಸೋನ್ಸ್ ಐಟಿಐ ಪ್ರಾಂಶುಪಾಲರಾಗಿ ಶಿವಪ್ರಸಾದ್ ಹೆಗ್ಡೆ

Picture of Namma Bedra

Namma Bedra

Bureau Report

ಮೂಡುಬಿದಿರೆ: ಎ. ಜಿ. ಸೋನ್ಸ್ ಐಟಿಐ ಸಂಸ್ಥೆಯ ಪ್ರಾಂಶುಪಾಲರಾಗಿ ಶಿವಪ್ರಸಾದ್ ಹೆಗ್ಡೆ ಪದೋನ್ನತಿ ಪಡೆದಿದ್ದಾರೆ.
ನವೆಂಬರ್ 1ರಿಂದ ಅವರು ಪ್ರಾಂಶುಪಾಲರಾಗಿ ಅಧಿಕಾರ ಸ್ವೀಕರಿಸಲಿದ್ದು, ಪ್ರಸ್ತುತ ಪ್ರಾಂಶುಪಾಲರಾಗಿರುವ ಶ್ರೀಕಾಂತ್ ಹೊಳ್ಳ ನಿವೃತ್ತರಾಗಿದ್ದಾರೆ.
ಶಿವಪ್ರಸಾದ್ ಹೆಗ್ಡೆ ಅವರು 1990ರಿಂದ ಇದೇ ಸಂಸ್ಥೆಯಲ್ಲಿ ತರಬೇತಿ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಶಿಕ್ಷಣ ಕ್ಷೇತ್ರದ ಜತೆಗೆ ಸಾಮಾಜಿಕ ಚಟುವಟಿಕೆಗಳಲ್ಲಿಯೂ ತೊಡಗಿಸಿಕೊಂಡಿರುವ ಅವರು, ಮೂಡುಬಿದಿರೆ ಲಯನ್ಸ್ ಕ್ಲಬ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.
ಜಿಲ್ಲೆಯ ರಸ್ತೆ ಸುರಕ್ಷತಾ ವಿಭಾಗದ ಮುಖ್ಯ ಸಂಯೋಜಕರಾಗಿ, ಲಯನ್ಸ್ ಟ್ರಸ್ಟ್ ಅಧ್ಯಕ್ಷರಾಗಿ, ಬಂಟರ ಸಂಘದ ಪದಾಧಿಕಾರಿಯಾಗಿ ಹಾಗೂ ಟೀಚರ್ಸ್ ಕೋ-ಆಪರೇಟಿವ್ ಬ್ಯಾಂಕ್ ಉಪಾಧ್ಯಕ್ಷರಾಗಿ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿದ್ದಾರೆ. ಧಾರ್ಮಿಕ ಸಂಘ-ಸಂಸ್ಥೆಗಳು ಮತ್ತು ಶೈಕ್ಷಣಿಕ ಸಂಸ್ಥೆಗಳಲ್ಲಿಯೂ ಸೇವೆ ಸಲ್ಲಿಸಿದ್ದಾರೆ.
ಚುನಾವಣಾ ಆಯೋಗ ನಡೆಸುವ ಚುನಾವಣೆಗಳಲ್ಲಿ ಮಾಸ್ಟರ್ ಟ್ರೈನರ್ ಆಗಿ ಆಸಕ್ತಿಯಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ಇದೀಗ ಎ. ಜಿ. ಸೋನ್ಸ್ ಐಟಿಐ ಪ್ರಾಂಶುಪಾಲರಾಗಿ ಪದೋನ್ನತಿ ಪಡೆದಿರುವ ಅವರು, ನವೆಂಬರ್ 1ರಂದು ನೂತನ ಜವಾಬ್ದಾರಿ ವಹಿಸಿಕೊಳ್ಳಲಿದ್ದಾರೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

Scroll to Top