ಅಲಂಗಾರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪ್ರಧಾನ ಅರ್ಚಕರಾದ ವೇ.ಮೂ.ಈಶ್ವರ ಭಟ್ ಅವರು ಇಂದು ನಿಧನರಾದರು.
ಸುದೀರ್ಘ ವರ್ಷಗಳಲ್ಲಿ ಅಲಂಗಾರು ದೇವಸ್ಥಾನದ ಅರ್ಚಕರಾಗಿ ಖ್ಯಾತರಾಗಿದ್ದ ಅವರು ಅಪಾರ ಅಭಿಮಾನಿಗಳನ್ನು ಹೊಂದಿದ್ದರು.
ಇಬ್ಬರು ಪುತ್ರರು, ಪುತ್ರಿಯನ್ನು ಅಗಲಿದ್ದಾರೆ.
ಇಂದು ಸಂಜೆ 4 ಗಂಟೆಗೆ ಅವರ ಅಂತ್ಯಕ್ರಿಯೆ ನಡೆಯಲಿದೆ ಎಂದು ತಿಳಿದು ಬಂದಿದೆ.












