ಪೆರಾಡಿ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘಕ್ಕೆ 75 ನೇ ವರ್ಷದ ಅಮೃತ ಮಹೋತ್ಸವ ಸಂದರ್ಭದಲ್ಲಿ ನಿರ್ಮಿಸಲಾಗಿರುವ ನೂತನ ಕಟ್ಟಡ ‘ಸಂಗಮ’ವನ್ನು ಸಹಕಾರ ಸಚಿವ ಲಕ್ಷ್ಮಣ ಸಂಗಪ್ಪ ಸವದಿ ಅವರು ಬುಧವಾರ ಬೆಳಿಗ್ಗೆ ಉದ್ಘಾಟಿಸಿದರು.
ಸಹಕಾರಿ ಕ್ಷೇತ್ರದ ಮೇಲೆ ಸಾರ್ವಜನಿಕರ ವಿಶ್ವಾಸ ದ್ವಿಗುಣವಾದರೆ ಗ್ರಾಮದ ಅಭಿವೃದ್ಧಿ, ನಿರುದ್ಯೋಗಿಗಳಿಗೆ ಉದ್ಯೋಗ ಸೃಷ್ಟಿಯಾಗಲು ಸಾಧ್ಯ ಎಂದು ಹೇಳಿದ ಅವರು ಸುದೀರ್ಘ ವರ್ಷಗಳ ಇತಿಹಾಸ ಹೊಂದಿರುವ ಸಹಕಾರಿ ಕ್ಷೇತ್ರವಿಂದು ಸಹಕಾರಿಗಳಿಗೆ ಹಲವು ರೀತಿಯ ಪ್ರಯೋಜನಕಾರಿಯಾಗಿದೆ ಎಂದರು.

ಗೋದಾಮು ಕಟ್ಟಡವನ್ನು ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷರಾದ ಎಂ.ಎನ್.ರಾಜೇಂದ್ರ ಕುಮಾರ್ ಅವರು ಉದ್ಘಾಟಿಸಿದರು.
ಮಾಜಿ ಸಚಿವರಾದ ವಿನಯ ಕುಮಾರ್ ಸೊರಕೆ,ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು,ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ ಅಜಿಲರು,ಶ್ರೀ ಕ್ಷೇತ್ರ ಪಡ್ಯಾರಬೆಟ್ಟದ ಅನುವಂಶೀಯ ಆಡಳಿತ ಮೊಕ್ತೇಸರರಾದ ಎ.ಜೀವಂಧರ ಕುಮಾರ್, ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ನಿರ್ದೇಶಕರಾದ ಕುಶಾಲಪ್ಪ ಗೌಡ,ಶಿರ್ತಾಡಿ ಚರ್ಚ್ ನ ಧರ್ಮಗುರುಗಳಾದ ವಂ.ಸಿಲ್ವೆಸ್ಟರ್ ವಿನ್ಸೆಂಟ್ ಲೋಬೋ,ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾ.ಯೋ.ಬಿ.ಸಿ.ಟ್ರಸ್ಟ್ ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅನಿಲ್ ಕುಮಾರ್ ಎಸ್.ಎಸ್., ಬೆಳ್ತಂಗಡಿ ತಾಲೂಕು ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ರಕ್ಷಿತ್ ಶಿವರಾಮ್,ಕುದ್ರೋಳಿ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್.ಪೂಜಾರಿ, ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕರಾದ ಎಚ್.ಎನ್.ರಮೇಶ್,ಪುತ್ತೂರು ಉಪವಿಭಾಗ ಸಹಕಾರ ಸಂಘಗಳ ನಿಬಂಧಕರಾದ ಎಸ್.ಎಂ.ರಘು, ಎಸ್.ಎನ್.ಹಿರೇಮಠ್, ಶೇಖರ್ ಕುಕ್ಕೇಡಿ ಮತ್ತಿತರರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಶುಭ ಹಾರೈಸಿದರು.
ಸಂಘದ ಉಪಾಧ್ಯಕ್ಷ ಶ್ರೀಪತಿ ಉಪಧ್ಯಾಯ,ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಹೇಮ, ನಿರ್ಸೇಶಕರಾದ ಎನ್.ಸೀತಾರಾಮ ರೈ,ಪ್ರವೀಣ್ ಗಿಲ್ಬರ್ಟ್ ಪಿಂಟೊ, ದೇವಕಿ ಡಿ.ಶೆಟ್ಟಿ, ಸುಜಾತ,ಕೃಷ್ಣಪ್ಪ,ರಾಜೇಶ್ ಶೆಟ್ಟಿ, ಸುರೇಶ್ ಅಂಚನ್,ಅಕ್ಷಯ್ ಕುಮಾರ್, ವಿಜಯ ನಾಯ್ಕ,ದ.ಕ.ಜಿ.ಕೇ.ಬ್ಯಾಂಕ್ ಪ್ರತಿನಿಧಿ ಸುದರ್ಶನ ಕೋಟ್ಯಾನ್, ಮನೋಜ್ ಕೆ, ಮುಹಮ್ಮದ್ ಶಾಫಿ, ಶೇಖ್ ಲತೀಫ್ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಸಂಘದ ಅಧ್ಯಕ್ಷ ಸತೀಶ್ ಕೆ.ಕಾಶಿಪಟ್ಣ ಅವರು ಸ್ವಾಗತಿಸಿ ಸಂಘ ಬೆಳೆದು ಬಂದ 75 ವರ್ಷಗಳ ಇತಿಹಾಸವನ್ನು ವಿವರಿಸಿದರು.
ಅಜಿತ್ ಕುಮಾರ್ ಕೊಕ್ರಾಡಿ ಕಾರ್ಯಕ್ರಮ ನಿರೂಪಿಸಿದರು.



