Latest News

ಗಾಂಜಾ ಮಾರಾಟ ಯತ್ನ: ಆರೋಪಿಯ ಬಂಧನ

Picture of Namma Bedra

Namma Bedra

Bureau Report

ನಿಷೇಧಿತ ಮಾದಕ ವಸ್ತು ಗಾಂಜಾವನ್ನು ಮಾರಾಟ ಮಾಡಲೆತ್ನಿಸುತ್ತಿದ್ದ ಆರೋಪಿಯೋರ್ವನನ್ನು ಮೂಡುಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಪಿ.ಜಿ.ನೇತೃತ್ವದ ಪೊಲೀಸರು ಬಂಧಿಸಿದ್ದಾರೆ.
ಬೆಳ್ತಂಗಡಿ ತಾಲೂಕು ಕುವೆಟ್ಟು ಗ್ರಾಮದ ಮುಹಮ್ಮದ್ ರಫೀಕ್ ಬಂಧಿತ ಆರೋಪಿ.
ಮೂಡುಬಿದಿರೆ ಸಮೀಪದ ಮೂಡುಕೊಣಾಜೆ ಗ್ರಾಮದ ಕೈಕಂಜಿಪಡ್ಪು ಸೇತುವೆ ಬಳಿ ಈತ ಗಾಂಜಾ ವ್ಯಸನಿಗಳಿಗೆ ಮಾರಾಟ ಮಾಡಲೆತ್ನಿಸುತ್ತಿದ್ದ ಮಾಹಿತಿ ಪಡೆದ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಆರೋಪಿಯಿಂದ 900 ಗ್ರಾಂ.ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ.
ಇನ್ಸ್ಪೆಕ್ಟರ್ ಸಂದೇಶ್ ಪಿ.ಜಿ. ನೇತೃತ್ವದ ತಂಡದಲ್ಲಿ ಎಸ್.ಐ.ಸಿದ್ದಪ್ಪ, ಎ.ಎಸ್.ಐ ಪ್ರಶಾಂತ್, ಕ್ರೈಮ್ ವಿಭಾಗದ ಸಿಬ್ಬಂಧಿಗಳಾದ ಮುಹಮ್ಮದ್ ಇಕ್ಬಾಲ್, ಮುಹಮ್ಮದ್ ಹುಸೇನ್, ಅಕೀಲ್ ಅಹ್ಮದ್, ರಾಜೇಶ್, ನಾಗರಾಜ ಲಮಾಣಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ಈ ರೀತಿಯ ಇನ್ನಷ್ಟು ಸುದ್ದಿಗಳು

Scroll to Top
× ಸುದ್ದಿ ಹಾಗು ಜಾಹೀರಾತು