ಸಹಕಾರಿ ಧುರೀಣ, ಕಂಬಳ ಹಾಗೂ ವಿವಿಧ ಕ್ಷೇತ್ರಗಳ ಸಾಧಕ ಕೊಳಕೆ ಇರ್ವತ್ತೂರು ಭಾಸ್ಕರ ಕೋಟ್ಯಾನ್ ಅವರಿಗೆ ಮೂಡುಬಿದಿರೆ ಕನ್ನಡ ಭವನದಲ್ಲಿ ನಡೆದ ಯುವವಾಹಿನಿ ಕೇಂದ್ರ ಸಮಿತಿಯ 37 ನೇ ವಾರ್ಷಿಕ ಸಮಾವೇಶದಲ್ಲಿ ‘ಸಾಧನಾ ಶ್ರೀ’ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಕೇಂದ್ರ ಸಮಿತಿಯ ಅಧ್ಯಕ್ಷರಾದ ಹರೀಶ್ ಕೆ.ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ಶಾಸಕ ಉಮಾನಾಥ ಕೋಟ್ಯಾನ್ ಅವರು ಉದ್ಘಾಟಿಸಿದರು.

ಭಾರತ್ ಕೋ ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ಸೂರ್ಯಕಾಂತ್ ಜೆ ಸುವರ್ಣ ಅವರು ‘ ಯುವ ಸಿಂಚನ’ ವಿಶೇಷಾಂಕವನ್ನು ಬಿಡುಗಡೆಗೊಳಿಸಿದರು.
ಹಿರಿಯ ನ್ಯಾಯವಾದಿ ಇರುವೈಲ್ ತಾರಾನಾಥ ಪೂಜಾರಿ, ವಿಕಾಸ್ ಎಜುಕೇಶನ್ ಟ್ರಸ್ಟಿ ಸೂರಜ್ ಕುಮಾರ್ ಕಲ್ಯಾ,ಉದ್ಯಮಿ ದಿನೇಶ್ ಅಮೀನ್, ಡಾ.ರಮೇಶ್,ಶ್ರೀ ಕ್ಷೇತ್ರ ಗೆಜ್ಜೆಗಿರಿಯ ರವಿ ಪೂಜಾರಿ,ಮೂಡುಬಿದಿರೆ ಬ್ರಹ್ಮಶ್ರೀ ಗುರುನಾರಾಯಣಸ್ವಾಮಿ ಸೇವಾ ಸಂಘದ ಅಧ್ಯಕ್ಷ ಸುರೇಶ್ ಪೂಜಾರಿ, ಉಡುಪಿ ಸರಕಾರಿ ಪ.ಪೂ.ಕಾಲೇಜಿನ ಪ್ರಾಧ್ಯಾಪಕಿ ಡಾ.ಸುನೀತಾ ವಿ.ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಶುಭ ಹಾರೈಸಿದರು.

ಸಾಮಾಜಿಕ ಕ್ಷೇತ್ರದ ಸಾಧಕ ಕುಮಾರ್ ಪೂಜಾರಿ ಇರುವೈಲ್ ಸಹಿತ ವಿವಿಧ ಕ್ಷೇತ್ರಗಳ ಸಾಧಕರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು.
ಯುವವಾಹಿನಿ ಮೂಡುಬಿದಿರೆ ಘಟಕದ ಅಧ್ಯಕ್ಷ ಶಂಕರ್ ಎ.ಕೋಟ್ಯಾನ್ ಅವರು ಸ್ವಾಗತಿಸಿ ಕೇಂದ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ ಜಗದೀಶ್ಚಂದ್ರ ಡಿ.ಕೆ ಪ್ರಾಸ್ತಾವಿಕವಾಗಿ ಮಾತನಾಡಿದರು.ಸಮಾವೇಶ ನಿರ್ದೇಶಕ ಗಣೇಶ್ ಕೋಡಿಕಲ್ ವಂದಿಸಿದರು. ಪ್ರಜ್ಞಾ ಓಡಿಲ್ನಾಳ,ಸ್ಮಿತೇಶ್ ಕಾರ್ಯಕ್ರಮ ನಿರೂಪಿಸಿದರು.