ಮೂಡುಬಿದಿರೆ: ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ನಿರ್ದೇಶಕರಾಗಿ ಜೋಯ್ಲಸ್ ಡಿಸೋಜಾ ತಾಕೊಡೆ ಅವರು ಆಯ್ಕೆಯಾಗಿದ್ದಾರೆ.
ಮೂಲ್ಕಿ ಮೂಡುಬಿದಿರೆ ಫಿರ್ಕಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಕ್ಷೇತ್ರವನ್ನು ಪ್ರತಿನಿಧಿಸುವ ಜೋಯ್ಲಸ್ ಡಿಸೋಜಾ ಅವರು, ಕರಿಂಜೆ ಸೇವಾ ಸಹಕಾರಿ ಸಂಘದ ನಿರ್ದೇಶಕರಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ.
