ಮಂಗಳೂರಿನಲ್ಲಿ ತಾಲೂಕು ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ನ ನಿರ್ದೇಶಕರಾಗಿ ಪ್ರದೀಪ್ ಕುಮಾರ್ ವಾಲ್ಪಾಡಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ವಾಲ್ಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ, ಪ್ರಸ್ತುತ ಸದಸ್ಯರಾಗಿ ಸೇವೆ ಸಲ್ಲಿಸುತ್ತಿರುವ ಪ್ರದೀಪ್ ಕುಮಾರ್ ಶಿಕ್ಷಣ, ಧಾರ್ಮಿಕ, ಹಾಗೂ ಸಾಮಾಜಿಕ ಸೇವಾ ಕ್ಷೇತ್ರಗಳಲ್ಲೂ ಸಕ್ರಿಯರಾಗಿದ್ದಾರೆ.
