ಸಾಮಾಜಿಕ, ರಾಜಕೀಯ, ಧಾರ್ಮಿಕ ಹಾಗೂ ಶಿಕ್ಷಣ ಕ್ಷೇತ್ರದ ಸೇವೆಗಾಗಿ ತಾಲೂಕು ಪಂಚಾಯತ್ ಮಾಜಿ ಸದಸ್ಯ ರುಕ್ಕಯ್ಯ ಪೂಜಾರಿ ಅವರನ್ನು ರೋಟರಿ ಕ್ಲಬ್ ಆಫ್ ಮೂಡುಬಿದಿರೆ ಟೆಂಪಲ್ ಟೌನ್ ವತಿಯಿಂದ ಸನ್ಮಾನಿಸಲಾಯಿತು.
ಮಂಗಳವಾರ ನಡೆದ ಟೆಂಪಲ್ ಟೌನ್ ನ ‘ಕುಟುಂಬ ಸಮ್ಮಿಲನ’ ಕಾರ್ಯಕ್ರಮದಲ್ಲಿ ರುಕ್ಕಯ್ಯ ಪೂಜಾರಿ ಅವರನ್ನು ಸನ್ಮಾನಿಸಲಾಯಿತು.

ಟೆಂಪಲ್ ಟೌನ್ ಅಧ್ಯಕ್ಷ ಪೂರ್ಣಚಂದ್ರ ಜೈನ್, ಕಾರ್ಯದರ್ಶಿ ಹರೀಶ್ ಎಂ.ಕೆ, ಮುನಿಯಾಲು ಪುರಂದರ ಆಚಾರ್ಯ, ಮಾಜಿ ಅಧ್ಯಕ್ಷರಾದ ಬಿ.ಸೀತಾರಾಮ ಆಚಾರ್ಯ, ಉಮೇಶ್ ರಾವ್,ರಾಜೇಶ್ ಬಂಗೇರ, ಶಾಂತಲಾ ಸೀತಾರಾಮ ಆಚಾರ್ಯ, ಡಾ.ಮಹಾವೀರ್ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.