Latest News

ನಿವೃತ್ತ ಶಿಕ್ಷಕ ನಾಗೇಶ್ ಅವರಿಗೆ ಬೀಳ್ಕೊಡುಗೆ

Picture of Namma Bedra

Namma Bedra

Bureau Report

ಮೂಡುಬಿದಿರೆ: ಡಿಸೆಂಬರ್ ತಿಂಗಳಲ್ಲಿ ನಿವೃತ್ತಿ ಹೊಂದಿದ ಮಿಜಾರು ಕರ್ನಾಟಕ ಪಬ್ಲಿಕ್ ಸ್ಕೂಲ್ ನ ದೈಹಿಕ ಶಿಕ್ಷಣ ಶಿಕ್ಷಕ, ಪ್ರಭಾರ ಮುಖ್ಯ ಶಿಕ್ಷಕ ಹಾಗೂ ಮೂಡುಬಿದಿರೆ ತಾಲೂಕು ಸರಕಾರಿ ನೌಕರರ ಸಂಘದ ನಿಕಟ ಪೂರ್ವ ಅಧ್ಯಕ್ಷ ಸರಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷರಾಗಿದ್ದ ಎಸ್. ನಾಗೇಶ್ ಅವರನ್ನು ಸರಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಮೂಡುಬಿದಿರೆ ತಾಲೂಕು ಸಮಿತಿಯ ವತಿಯಿಂದ ಗೌರವಿಸಲಾಯಿತು.
ಮಾಜಿ ಸಚಿವ ಕೆ. ಅಭಯಚಂದ್ರ ಜೈನ್, ತಾಲೂಕು ಪಂಚಾಯಿತಿನ ಕಾರ್ಯನಿರ್ವಹಣಾಧಿಕಾರಿ ಕುಸುಮಾಧರ, ತೆಂಕಮಿಜಾರು ಗ್ರಾ.ಪಂಚಾಯತ್ ಅಧ್ಯಕ್ಷೆ ಶಾಲಿನಿ, ಸದಸ್ಯರಾದ ನೇಮಿರಾಜ್ ಶೆಟ್ಟಿ, ಲಕ್ಷ್ಮೀ, ಗೀತಾ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ರೋಹಿಣಿ , ಕ್ಷೇತ್ರ ಶಿಕ್ಷಣಾಧಿಕಾರಿ ವಿರೂಪಾಕ್ಷಪ್ಪ, ಆಳ್ವಾಸ್ ನ ಡಾ.ವಿನಯ್ ಆಳ್ವ, ಪಡುಮಾರ್ನಾಡಿನ ಪಿಡಿಒ ಸಾಯೀಶ ಚೌಟ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ದಿನಕರ್ ಶೆಟ್ಟಿ ಕುಂದಾಪುರ, ಉಡುಪಿ ಜಿಲ್ಲೆಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರು, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ, ತೀರ್ಥಹಳ್ಳಿ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಜಿಲ್ಲಾ ದೈ.ಶಿ.ಶಿ. ಸಂಘ, ಪ್ರೌಢಶಾಲಾ ಶಿಕ್ಷಕರ ಸಂಘ, ಅನುದಾನಿತ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳು, ಹಳೆ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು ಭಾಗವಹಿಸಿ
ಗೌರವಿಸಿದರು.

ಈ ರೀತಿಯ ಇನ್ನಷ್ಟು ಸುದ್ದಿಗಳು

Scroll to Top
× ಸುದ್ದಿ ಹಾಗು ಜಾಹೀರಾತು