ಕೋಟಿ ಚೆನ್ನಯ ಜೋಡುಕರೆ ಕಂಬಳ ಸಮಿತಿಯ ಆಶ್ರಯದಲ್ಲಿ ಜ.25 ರಂದು ನಡೆಯಲಿರುವ ಹೊನಲು ಬೆಳಕಿನ ಕಂಬಳದ ಆಮಂತ್ರಣ ಪತ್ರಿಕೆಯನ್ನು ಕಂಬಳ ಸಮಿತಿ ಅಧ್ಯಕ್ಷ, ಶಾಸಕ ಉಮಾನಾಥ ಕೋಟ್ಯಾನ್ ಅವರು ಪುತ್ತಿಗೆ ಮಹತೋಭಾರ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಬಿಡುಗಡೆಗೊಳಿಸಿದರು.
ಕಂಬಳ ಸಮಿತಿಯ ಪ್ರಧಾನ ಕಾರ್ಯದರ್ಶಿ ಕೆ.ಗುಣಪಾಲ ಕಡಂಬ,ದ.ಕ.ಜಿಲ್ಲಾ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ಕೆ.ಪಿ.ಸುಚರಿತ ಶೆಟ್ಟಿ, ಪುರಸಭಾ ಉಪಾಧ್ಯಕ್ಷ ನಾಗರಾಜ ಪೂಜಾರಿ, ಬಿಜೆಪಿ ಕ್ಷೇತ್ರ ಪ್ರಧಾನ ಕಾರ್ಯದರ್ಶಿ ರಂಜಿತ್ ಪೂಜಾರಿ, ಪ್ರಮುಖರಾದ ಕೆ.ಆರ್.ಪಂಡಿತ್, ಶಾಂತಿಪ್ರಸಾದ್ ಹೆಗ್ಡೆ,ಭರತ್ ಶೆಟ್ಟಿ ಬೆಳುವಾಯಿ, ನಾಗವರ್ಮ ಜೈನ್, ಶಶಿಧರ ಅಂಚನ್ ಮತ್ತಿತರರು ಉಪಸ್ಥಿತರಿದ್ದರು.
