ಮಂಗಳೂರು-ಮೂಡುಬಿದಿರೆ-ಕಾರ್ಕಳ ರಸ್ತೆಗೆ ಈಗಾಗಲೇ ಕೆಎಸ್ಸಾರ್ಟಿಸಿ ಬಸ್ ಪ್ರಾರಂಭಗೊಂಡಿರುವುದರಿಂದ ಈ ಭಾಗದ ಅನೇಕ ಜನರಿಗೆ, ಮಹಿಳೆಯರಿಗೆ,ವಿದ್ಯಾರ್ಥಿನಿಯರಿಗೆ ಅನುಕೂಲವಾಗಿದೆ, ಈ ರಸ್ತೆಯ ಬಸ್ ಗಳಿಗೆ ಪಕ್ಕಾ ಪರ್ಮಿಟ್ ( ಅಧಿಕೃತ ಪರವಾನಿಗೆ) ನೀಡಬೇಕೆಂದು ಮೂಡುಬಿದಿರೆ ತಾಲೂಕು ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿ ಅಧ್ಯಕ್ಷ ಅರುಣ್ ಕುಮಾರ್ ಶೆಟ್ಟಿ ಅವರು ಆಗ್ರಹಿಸಿದ್ದಾರೆ.
ಮಂಗಳೂರಿನಲ್ಲಿಂದು ನಡೆದ ಗ್ಯಾರಂಟಿ ಯೋಜನಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು ಜಿಲ್ಲಾ ಗ್ಯಾರಂಟಿ ಯೋಜನಾ ಅಧ್ಯಕ್ಷರು ಮತ್ತು ಸಾರಿಗೆ ಇಲಾಖೆ ಈ ಬಗ್ಗೆ ಸಾರಿಗೆ ಸಚಿವರಿಗೆ ಮನವಿ ಸಲ್ಲಿಸಬೇಕೆಂದು ಆಗ್ರಹಿಸಿದರು.
ಮೂಡುಬಿದಿರೆಯಲ್ಲಿ ಕೆಎಸ್ಸಾರ್ಟಿಸಿ ಬಸ್ ನಿಲುಗಡೆಗೆ ಪಂಚರತ್ನ ಹೊಟೇಲ್ ವಿರುದ್ಧ ದಿಕ್ಕಿನಲ್ಲಿ ಮತ್ತು ರಾಜೀವಗಾಂಧಿ ವಾಣಿಜ್ಯ ಸಂಕೀರ್ಣ ಎದುರು ಸ್ಥಳ ನಿಗದಿಪಡಿಸಬೇಕೆಂದೂ ಅವರು ಆಗ್ರಹಿಸಿದ್ದಾರೆ.
ಅಲ್ಲದೆ ಮಂಗಳೂರು ಮೂಡುಬಿದಿರೆ ಕಾರ್ಕಳ ರಸ್ತೆಗೆ ಶೀಘ್ರದಲ್ಲೇ ವಿದ್ಯುತ್ ಚಾಲಿತ ಬಸ್ಸುಗಳನ್ನು ಪ್ರಾರಂಭಿಸಬೇಕೆಂದೂ ಅರುಣ್ ಕುಮಾರ್ ಶೆಟ್ಟಿ ಅವರು ಒತ್ತಾಯಿಸಿದ್ದಾರೆ.