Latest News

ಹೊಸಂಗಡಿ ಹರಿಪ್ರಸಾದ್ ಹೃದಯಾಘಾತದಿಂದ ನಿಧನ

Picture of Namma Bedra

Namma Bedra

Bureau Report

ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಧರಣೇಂದ್ರ ಕುಮಾರ್ ಅವರ ಸಹೋದರ ಹರಿಪ್ರಸಾದ್ ಅವರು ಭಾನುವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಹರಿಯಣ್ಣ ಎಂದೇ ಜನಪ್ರಿಯರಾಗಿದ್ದ ಹೊಸಂಗಡಿ ನಿವಾಸಿಯಾಗಿರುವ ಹರಿಪ್ರಸಾದ್ ಅವರು ಹೊಸಂಗಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾಗಿ, ಪ್ರಸ್ತುತ ಸದಸ್ಯರಾಗಿ, ಪೆರಾಡಿ ಸೊಸೈಟಿ ಬ್ಯಾಂಕ್ ನಿರ್ದೇಶಕರಾಗಿ ಸೇವೆ ಸಲ್ಲಿಸಿರುವುದು ಮಾತ್ರವಲ್ಲದೆ ಹಲವಾರು ಸಮಾಜಮುಖಿ ಸಂಘ ಸಂಸ್ಥೆಗಳಲ್ಲಿ ತನ್ನನ್ನು ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು.
ಹೊಸಂಗಡಿಯಲ್ಲಿ ಇಂದು ಹೊಸಂಗಡಿ ಫ್ರೆಂಡ್ಸ್ ಕ್ಲಬ್ ಸದಸ್ಯರಾಗಿದ್ದ ದಿ.ರತ್ನಾಕರ್ ಅವರ ಸ್ಮರಣಾರ್ಥ ಕ್ರಿಕೆಟ್ ಪಂದ್ಯಾಕೂಟ ನಡೆದಿದ್ದು ಆ ಪಂದ್ಯದ ಕೂಟದಲ್ಲಿ ಭಾಗವಹಿಸಿದ್ದರೆನ್ನಲಾಗಿದೆ.ಆಬಳಿಕ ಅವರಿಗೆ ಎದೆನೋವು ಕಾಣಿಸಿಕೊಂಡಿದ್ದು ಅವರನ್ನು ಮೂಡುಬಿದಿರೆ ಆಳ್ವಾಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರು ಹೃದಯಾಘಾತದಿಂದ ನಿಧನರಾದರೆಂದು ತಿಳಿದು ಬಂದಿದೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

Scroll to Top
× ಸುದ್ದಿ ಹಾಗು ಜಾಹೀರಾತು