ನೆಲ್ಲಿಕಾರು ವ್ಯವಸಾಯ ಸೇವಾ ಸಹಕಾರಿ ಸಂಘದ ಆಡಳಿತ ಮಂಡಳಿಯ ನಿರ್ದೇಶಕರ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ತಾ.ಪಂ.ಮಾಜಿ ಸದಸ್ಯ ರುಕ್ಕಯ್ಯ ಪೂಜಾರಿ, ಯುವ ನಾಯಕ ಅಶ್ವಥ್ ಪಣಪಿಲ ಸಹಿತ ಒಟ್ಟು 12 ಮಂದಿ ಆಯ್ಕೆಯಾಗಿದ್ದಾರೆ.

ಸಾಮಾಜಿಕ, ಧಾರ್ಮಿಕ,ರಾಜಕೀಯ ಹಾಗೂ ಶಿಕ್ಷಣ ಕ್ಷೇತ್ರಕ್ಕೆ ತನ್ನದೇ ಆದ ಕೊಡುಗೆಗಳ ಮೂಲಕ ಗಮನಸೆಳೆದಿರುವ ರುಕ್ಕಯ್ಯ ಪೂಜಾರಿ ಅವರು ಕಳೆದ ಸಾಲಿನ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯ ಆಕಾಂಕ್ಷಿಯಾಗಿದ್ದರು.ಆದರೆ ಆ ಪ್ರಶಸ್ತಿ ಅವರಿಗೆ ಸಿಕ್ಕಿರಲಿಲ್ಲ.ಈ ಚುನಾವಣೆಯಲ್ಲಿ ಗೆಲ್ಲುವ ಮೂಲಕ ‘ ಜನರು ತನಗೆ ದೊಡ್ಡ ಪ್ರಶಸ್ತಿ ನೀಡಿದ್ದಾರೆ’ ಎಂದು ಮತಹಾಕಿದವರಿಗೆ ಕೃತಜ್ಞತೆ ಸಲ್ಲಿಸಿರುವ ಅವರು ಗೆಲುವಿನ ಹರ್ಷ ವ್ಯಕ್ತಪಡಿಸಿದ್ದಾರೆ.
ಅಶ್ವಥ್ ಪಣಪಿಲ ಅವರ ಮೊದಲ ಚುನಾವಣೆಯಿದು.ರಾಜಕೀಯದಲ್ಲಿ ಬಿಜೆಪಿ ಪಕ್ಷದ ವಿವಿಧ ಜವಾಬ್ದಾರಿಗಳನ್ನು ಯಶಸ್ವಿಯಾಗಿ ನಿರ್ವಹಿಸಿರುವ ಅವರು ಸಹಕಾರಿ ಕ್ಷೇತ್ರದ ಚುನಾವಣೆಯಲ್ಲಿ ಗೆಲ್ಲುವ ಮೂಲಕ ಎಂಟ್ರಿ ನೀಡಿದ್ದಾರೆ.
ಉಳಿದಂತೆ ನೆಲ್ಲಿಕಾರು ಪಂಚಾಯತ್ ಅಧ್ಯಕ್ಷ ಉದಯ ಪೂಜಾರಿ, ಧನಂಜಯ ಆಳ್ವ ಮಾಂಟ್ರಾಡಿ, ಶಿರ್ತಾಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಪದ್ಮನಾಭ ಕೋಟ್ಯಾನ್, ಫ್ರೆಡ್ರಿಕ್ ಪಿಂಟೊ, ಈದು ಪಂಚಾಯತ್ ಅಧ್ಯಕ್ಷ ಸದಾನಂದ ಪೂಜಾರಿ,ಪ್ರೀತಿ, ಲಕ್ಷ್ಮಿ ಅವರು ಗೆಲುವು ಸಾಧಿಸಿದ್ದಾರೆ.