ಮೂಡುಬಿದಿರೆ ಸಮುದಾಯ ಆರೋಗ್ಯ ಕೇಂದ್ರದಲ್ಲೀಗ ದಂತ ವೈದ್ಯರೇ ಮುಖ್ಯ ವೈದ್ಯಾಧಿಕಾರಿಯಾಗಿದ್ದು ಪೂರ್ಣಕಾಲಿಕ ವೈದ್ಯರ ನೇಮಕ ಮಾಡಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಅವರಲ್ಲಿ ಪತ್ರಕರ್ತ ಅಶ್ರಫ್ ವಾಲ್ಪಾಡಿ ಅವರು ಮನವಿ ಮಾಡಿದ್ದಾರೆ.
ಶುಕ್ರವಾರ ಮೂಡುಬಿದಿರೆ ಸಮಾಜ ಮಂದಿರದಲ್ಲಿ ಹಕ್ಕುಪತ್ರ ವಿತರಣೆಗೆ ಆಗಮಿಸಿದ್ದ ಸಚಿವರಲ್ಲಿ ಮನವಿ ಮಾಡಿದ ಅಶ್ರಫ್ ವಾಲ್ಪಾಡಿ ಅವರು ಈ ಸಮುದಾಯ ಆರೋಗ್ಯ ಕೇಂದ್ರವನ್ನು ತಾಲೂಕು ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸಬೇಕು ಮತ್ತು ಶವ ಶೀತಲೀಕರಣ ಘಟಕದ ವ್ಯವಸ್ಥೆ ಕೂಡಾ ಶೀಘ್ರದಲ್ಲಿ ಆಗಬೇಕೆಂದು ಆಗ್ರಹಿಸಿದ್ದಾರೆ.
