ಬೆಳುವಾಯಿಯ ಬ್ಲಾಸಮ್ ಆಂಗ್ಲ ಮಾಧ್ಯಮ ಶಾಲೆಯ ಬೆಳ್ಳಿಹಬ್ಬದ ಪ್ರಯುಕ್ತ ನಿರ್ಮಿಸಲಾಗಿರುವ ನೂತನ ಕಟ್ಟಡ ‘ ಬ್ಲಾಸಮ್ ಟವರ್ಸ್’ ನ ಉದ್ಘಾಟನೆಯು ಇಂದು ಬೆಳಿಗ್ಗೆ 10 ಗಂಟೆಗೆ ನಡೆಯಲಿದೆ.
ಮಾಜಿ ಸಚಿವ ಕೆ.ಅಭಯಚಂದ್ರ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಸಂಸ್ಥೆಯ ಟ್ರಸ್ಟಿ ಆಗಿರುವ ಶ್ರೀಮತಿ ಹಿಲ್ಡಾ ಮಸ್ಕರೇನಸ್ ಅವರು ನೂತನ ಕಟ್ಟಡವನ್ನು ಉದ್ಘಾಟಿಸಲಿದ್ದಾರೆ.
ಬೆಳುವಾಯಿ ಚರ್ಚ್ ನ ಧರ್ಮಗುರುಗಳಾದ ರೆ.ಫಾ.ಜೋಸೆಫ್ ಕರ್ಡೋಝ ಅವರು ಆಶೀರ್ವಚನ ನೀಡಲಿದ್ದಾರೆ.

ಶಾಸಕ ಉಮಾನಾಥ ಕೋಟ್ಯಾನ್,ಸಂಪಿಗೆ ಚರ್ಚ್ ನ ಧರ್ಮಗುರುಗಳಾದ ರೆ.ಫಾ.ವಿನ್ಸೆಂಟ್ ಡಿಸೋಜ, ಮೈಸೂರು ಇ.ಎಸ್.ಐ ಕೋರ್ಟ್ ನ ಜಿಲ್ಲಾ ನ್ಯಾಯಾಧೀಶರಾದ ರುಡಾಲ್ಫ್ ಪಿರೇರ,ಮೂಡುಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಪಿ.ಜಿ, ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲರಾದ ಪೀಟರ್ ಫರ್ನಾಂಡೀಸ್,ಕ್ಷೇತ್ರ ಶಿಕ್ಷಣಾಧಿಕಾರಿ ವಿರೂಪಾಕ್ಷಪ್ಪ,ಬೆಳುವಾಯಿ ಕೊ.ಅಪರೇಟಿವ್ ಸೊಸೈಟಿಯ ಅಧ್ಯಕ್ಷ ಭಾಸ್ಕರ ಎಸ್.ಕೋಟ್ಯಾನ್ ಹಾಗೂ ಬೆಳುವಾಯಿಯ ಮುಹಮ್ಮದ್ ಅನ್ಸಾರ್ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಬ್ಲಾಸಮ್ ಸಂಸ್ಥೆಯ ಅಧ್ಯಕ್ಷರಾದ ಸೈಮನ್ ಮಸ್ಕರೇನಸ್ ಅವರು ತಿಳಿಸಿದ್ದಾರೆ.