Latest News

ಧರ್ಮಸ್ಥಳ ಗ್ರಾ. ಯೋ. ವತಿಯಿಂದ ‘ವಾತ್ಸಲ್ಯ’ ಮನೆ ಹಸ್ತಾಂತರ

Picture of Namma Bedra

Namma Bedra

Bureau Report

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್, ಮೂಡುಬಿದಿರೆ ವತಿಯಿಂದ ವಾಲ್ಪಾಡಿ ಗ್ರಾಮದ ಶ್ರೀಮತಿ ಬಿಜಿಲು ಎಂಬವರಿಗೆ ನಿರ್ಮಿಸಲಾದ ‘ವಾತ್ಸಲ್ಯ’ ಮನೆ ಹಸ್ತಾಂತರ ಕಾರ್ಯಕ್ರಮವು ಸೋಮವಾರ ಬೆಳಿಗ್ಗೆ ನಡೆಯಿತು.


ಯೋಜನೆಯ ಟ್ರಸ್ಟಿ,ಶಿರ್ತಾಡಿ ಶಿಮುಂಜೆಗುತ್ತು ಸಂಪತ್ ಸಾಮ್ರಾಜ್ಯ ಅವರು ದೀಪ ಬೆಳಗಿಸಿ ಉದ್ಘಾಟಿಸಿ ‘ ಸಮಾಜದಲ್ಲಿ ಹಿಂದುಳಿದವರಿಗೆ,ಅಶಕ್ತರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಹಾಗೂ ಮಾತೃಶ್ರೀ ಹೇಮಾವತಿ ವಿ.ಹೆಗ್ಗಡೆಯವರು ಹಲವಾರು ಸೇವಾ ಯೋಜನೆಗಳನ್ನು ರೂಪಿಸಿದ್ದಾರೆ,ಅವುಗಳ ಪೈಕಿ ‘ ವಾತ್ಸಲ್ಯ’ ಯೋಜನೆಯೂ ಒಂದು, ಬಡವರ ಪಾಲಿನ ಆಶಾಕಿರಣವಾಗುತ್ತಿರುವ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾ.ಯೋಜನೆಯ ಈ ಕೆಲಸ ಶ್ಲಾಘನೀಯ’ ಎಂದರು.
ವಾಲ್ಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ವಿಶಾಲಾಕ್ಷಿ ಅವರು ಅಧ್ಯಕ್ಷತೆ ವಹಿಸಿದ್ದರು.
ಯೋಜನೆಯ ಉಡುಪಿ ಪ್ರಾದೇಶಿಕ ಕಚೇರಿಯ ಪ್ರಾದೇಶಿಕ ನಿರ್ದೇಶಕರಾದ ದುಗ್ಗೇ ಗೌಡ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿ ಶುಭ ಹಾರೈಸಿದರು.
ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀಧರ ಬಂಗೇರ, ಶ್ರೀಮತಿ ಸುಶೀಲ,ಮಾಜಿ ಸದಸ್ಯ ಲಕ್ಷ್ಮಣ ಸುವರ್ಣ, ಯೋಜನೆಯ ವಿವಿಧ ಒಕ್ಕೂಟಗಳ ಅಧ್ಯಕ್ಷರಾದ ರವಿ,ಜೆಸಿಂತಾ ಫೆರ್ನಾಂಡಿಸ್,ಸುಕೇಶ್,ಶೇಖರ ಪೂಜಾರಿ, ಮೇಲ್ವಿಚಾರಕರಾದ ಶಿವಲಕ್ಷ್ಮಿ,ಸೇವಾ ಪ್ರತಿನಿಧಿಗಳಾದ ಸುಜಾತ,ವೀಣಾ,ಸುಜಾತ,ಮಾಡದಂಗಡಿ ಶಾಲಾ ಮುಖ್ಯೋಪಾಧ್ಯಾಯರಾದ ವಾಣಿಶ್ರೀ,ಸಹಶಿಕ್ಷಕಿ ರಶ್ಮಿ ಎಂ.ಎಸ್, ಶ್ರೀಮತಿ ಸುಮತಿ,ಕಿಟ್ಟು,ಮತ್ತಿತರರು ಉಪಸ್ಥಿತರಿದ್ದರು.
ಮೂಡುಬಿದಿರೆ ತಾಲೂಕು ಯೋಜನಾಧಿಕಾರಿ ಶ್ರೀಮತಿ ಸುನೀತಾ ಅವರು ಕಾರ್ಯಕ್ರಮ ನಿರೂಪಿಸಿ ಸ್ವಾಗತಿಸಿದರು. ಜ್ಞಾನವಿಕಾಸ ಸಮನ್ವಯಾಧಿಕಾರಿ ಶ್ರೀಮತಿ ವಿದ್ಯಾ ವಂದಿಸಿದರು.

ಈ ರೀತಿಯ ಇನ್ನಷ್ಟು ಸುದ್ದಿಗಳು

Scroll to Top
× ಸುದ್ದಿ ಹಾಗು ಜಾಹೀರಾತು