ಗುರುವಾಯನಕೆರೆ: ಪ್ರತಿಷ್ಠಿತ ವಿಜಯ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ ಇದರ ಆಡಳಿತ ಮಂಡಳಿಗೆ ಮುಂದಿನ ಐದು ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಯುವ ಉದ್ಯಮಿ, ಸಹಕಾರಿ ರಂಗದಲ್ಲಿ ಹಲವಾರು ವರ್ಷಗಳ ಅನುಭವ ಹೊಂದಿರುವ ಅಜಿತ್ ಕುಮಾರ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
2005 ರಲ್ಲಿ ಸ್ಥಾಪನೆಯಾದ ಈ ಸಂಸ್ಥೆಯು ಪ್ರಸ್ತುತ 20 ಶಾಖೆಗಳನ್ನು ಹೊಂದಿದ್ದು 2024ನೇ ಸಾಲಿನ ಅತ್ಯುತ್ತಮ ಸಹಕಾರಿ ಸಂಘ ಪ್ರಶಸ್ತಿ ಪುರಸ್ಕೃತವಾಗಿದೆ.


