ಇರುವೈಲು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಸುಜಾತ ಜೆ. ಶೆಟ್ಟಿ

Picture of Namma Bedra

Namma Bedra

Bureau Report

ಇರುವೈಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಮುಂದಿನ ಮೂರು ವರ್ಷಗಳ ಅವಧಿಗೆ ಶ್ರೀಮತಿ ಸುಜಾತ ಜೆ.ಶೆಟ್ಟಿ ಅವರು ಆಯ್ಕೆಯಾಗಿದ್ದಾರೆ.
ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆಯ ಸಹಾಯಕ ಆಯುಕ್ತರ ಆದೇಶದಂತೆ ವ್ಯವಸ್ಥಾಪನಾ ಸಮಿತಿಯ ಸದಸ್ಯರ ಸಭೆಯಲ್ಲಿ ಈ ಆಯ್ಕೆ ನಡೆದಿದೆ.
ವ್ಯವಸ್ಥಾಪನಾ ಸಮಿತಿಯ ಸದಸ್ಯರಾಗಿ ದೇವಸ್ಥಾನದ ಪ್ರಧಾನ ಅರ್ಚಕ ಐ ರಾಘವೇಂದ್ರ ಭಟ್ ಇರುವೈಲ್, ಶಿವಾನಂದ ನಾಯ್ಕ್, ದೀಪಾ,ಪ್ರದೀಪ್ ಶೆಟ್ಟಿ, ಪೂವಪ್ಪ ಸಾಲ್ಯಾನ್,ಶುಭಕರ ಕಾಜವ, ಪದ್ಮನಾಭ ಪೂಜಾರಿ ಮತ್ತು ಮೋಹನ್ ನಾಯಕ್ ಅವರು ಆಯ್ಕೆಯಾಗಿದ್ದಾರೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

Scroll to Top