ಮೂಡುಬಿದಿರೆ ತಾಲೂಕು ಮುಸ್ಲಿಂ ಸೆಂಟ್ರಲ್ ಕಮಿಟಿ ವತಿಯಿಂದ ಕೇಂದ್ರ ಸರಕಾರವು ಜಾರಿಗೆ ತರಲುದ್ದೇಶಿಸಿರುವ ವಕ್ಫ್ ಮಸೂದೆ ತಿದ್ದುಪಡಿ ವಿರುದ್ಧ ಮಾಹಿತಿ ಕಾರ್ಯಗಾರವು ಮೂಡುಬಿದಿರೆ ಸಮಾಜ ಮಂದಿರದಲ್ಲಿ ನಡೆಯಿತು.
ಮೂಡುಬಿದಿರೆ ಜುಮ್ಮಾ ಮಸೀದಿಯ ಖತೀಬರಾದ ಅಬೂಬಕ್ಕರ್ ಸಿದ್ದೀಕ್ ದಾರಿಮಿ ಅವರು ಕಾರ್ಯಾಗಾರವನ್ನು ಉದ್ಘಾಟಿಸಿ ವಕ್ಫ್ ಅರ್ಥವನ್ನು ವಿವರಿಸಿದರು.
ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದ ಎಸ್.ಡಿ.ಪಿ.ಐ. ಜಿಲ್ಲಾಧ್ಯಕ್ಷ ಜಲೀಲ್ ಕೃಷ್ಣಾಪುರ ಅವರು ” ವಕ್ಫ್ ಮಸೂದೆ ತಿದ್ದುಪಡಿ ಆದಲ್ಲಿ ಮುಸ್ಲಿಂ ಸಮುದಾಯಕ್ಕಾಗುವ ನಷ್ಟ, ಕೇಂದ್ರ ಸರಕಾರ ಈಗ ವಕ್ಫ್ ತಿದ್ದುಪಡಿ ಹಿಂದೆ ಬಿದ್ದಿರುವ ಅಜೆಂಡಾ, ಇದರಿಂದ ಮಂದಾಗಬಹುದಾದ ನಷ್ಟಗಳ ಬಗ್ಗೆ ಮತ್ತು ಈ ತಿದ್ದುಪಡಿ ವಿರುದ್ಧ ಮುಸ್ಲಿಂ ಸಮುದಾಯ ಏನು ಮಾಡಬಹುದು’ ಎಂಬುದರ ಬಗ್ಗೆ ಸಮಗ್ರವಾಗಿ ಮಾಹಿತಿ ನೀಡಿದರು.
ಮುಸ್ಲಿಂ ಸೆಂಟ್ರಲ್ ಕಮಿಟಿಯ ಅಧ್ಯಕ್ಷ ಅಬ್ದುಸ್ಸಲಾಮ್ ಬೂಟ್ ಬಝಾರ್ ಅಧ್ಯಕ್ಷತೆ ವಹಿಸಿದ್ದರು.
ಕಾರ್ಯದರ್ಶಿ ಇರ್ಷಾದ್ ಎನ್.ಜಿ. ಕಾರ್ಯಕ್ರಮ ನಿರೂಪಿಸಿದರು. ಅಶ್ರಫ್ ಮರೋಡಿ ವಂದಿಸಿದರು.
ಮೂಡುಬಿದಿರೆ ವಲಯದ ಜಮಾತ್ ಕಮಿಟಿಗಳ ಪದಾಧಿಕಾರಿಗಳು ಈ ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು.


