ಪುತ್ತಿಗೆ ಮಹತೋಭಾರ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ನಡೆಯಲಿರುವ ಪುನಃ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವಕ್ಕೆ ಹೋಗಲಿರುವ ಭಕ್ತಾದಿಗಳಿಗೆ ಕೆನರಾ ಬಸ್ ಮಾಲಕರ ಸಂಘದ ಮೂಡುಬಿದಿರೆ ವಲಯ ವತಿಯಿಂದ ಉಚಿತ ಬಸ್ ವ್ಯವಸ್ಥೆ ಮಾಡಲಾಗಿದೆ.
ಮಾರ್ಚ್ 2,3 ಮತ್ತು 6 ರಂದು ಮೂಡುಬಿದಿರೆ ಬಸ್ ನಿಲ್ದಾಣದಿಂದ ಪುತ್ತಿಗೆ ಕ್ಷೇತ್ರದವರೆಗೆ ಈ ಉಚಿತ ಬಸ್ ವ್ಯವಸ್ಥೆಯನ್ನು ಮಾಡಲಾಗಿದ್ದು ಭಕ್ತಾದಿಗಳು ಇದರ ಪ್ರಯೋಜನ ಪಡೆದುಕೊಳ್ಳುವಂತೆ ಸಂಘದ ಅಧ್ಯಕ್ಷರು ವಿನಂತಿಸಿದ್ದಾರೆ.
