ಕಡಂದಲೆ ಬಳಿ ಕಳೆದ ಶನಿವಾರ ಟ್ಯೂಷನ್ ಮುಗಿಸಿಕೊಂಡು ಮನೆಗೆ ಹೋಗುತ್ತಿದ್ದ ಅಪ್ರಾಪ್ತ ವಿದ್ಯಾರ್ಥಿನಿಯ ಮಾನಭಂಗಕ್ಕೆ ಯತ್ನಿಸಿದ್ದ ಆರೋಪಿಯನ್ನು ಮೂಡುಬಿದಿರೆ ಪೊಲೀಸರು ಬಂಧಿಸಿದ್ದಾರೆ.
ಅಲಂಗಾರು ಉಳಿಯ ನಿವಾಸಿ ಪವನ್ ಕುಮಾರ್ ಬಂಧಿತ ಆರೋಪಿ.
ಮಾ. 8 ರ ಶನಿವಾರ ಮಧ್ಯಾಹ್ನದ ಬಳಿಕ ಟ್ಯೂಷನ್ ಮುಗಿಸಿಕೊಂಡು ತನ್ನ ಸೈಕಲ್ ನಲ್ಲಿ ಮನೆಕಡೆ ಹೋಗುತ್ತಿದ್ದ 14 ವರ್ಷದ ವಿದ್ಯಾರ್ಥಿನಿಯನ್ನು ದ್ವಿಚಕ್ರ ವಾಹನದಲ್ಲಿ ಆಕೆಯನ್ನು ಹಿಂಬಾಲಿಸಿದ್ದ ಯುವಕನೋರ್ವ ಆಕೆಯನ್ನು ಅಡ್ಡಗಟ್ಟಿ ಮಾನಭಂಗಕ್ಕೆ ಯತ್ನಿಸಿದ್ದ.ಅಪ್ರಾಪ್ತೆ ಸೈಕಲ್ ನ್ನು ಅಲ್ಲೇ ಬಿಟ್ಟು ಆತನಿಂದ ತಪ್ಪಿಸಿಕೊಂಡು ಹೋಗಿದ್ದಳು.ವಿಷಯ ತಿಳಿಯುತ್ತಿದ್ದಂತೇ ಆರೋಪಿ ಅಲ್ಲಿಂದ ಪರಾರಿಯಾಗಿದ್ದ.
ಈ ಬಗ್ಗೆ ಮೂಡುಬಿದಿರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಎಸ್.ಐ .ಪ್ರತಿಭಾ ಅವರು ಪ್ರಕರಣ ದಾಖಲಿಸಿಕೊಂಡಿದ್ದರು.
ತನಿಖೆ ಕೈಗೆತ್ತಿಕೊಂಡ ಇನ್ಸ್ಪೆಕ್ಟರ್ ಸಂದೇಶ್ ಪಿ.ಜಿ.ನೇತೃತ್ವದ ಪೊಲೀಸರು ಆರೋಪಿಯ ಪತ್ತೆಗೆ ಬಲೆ ಬೀಸಿದ್ದರು.ಅಂತೂ ಆರೋಪಿಯನ್ನು ಪತ್ತೆ ಹಚ್ಚುವಲ್ಲಿ ಪೊಲೀಸರ ತಂಡವು ಯಶಸ್ವಿಯಾಗಿದೆ. ಆರೋಪಿಯ ವಿರುದ್ಧ ಫೋಕ್ಸೋ ಪ್ರಕರಣ ದಾಖಲಾಗಿದೆ.
ಅಪರಾಧ ವಿಭಾಗದ ಸಿಬ್ಬಂದಿಗಳಾದ ಅಖಿಲ್ ಅಹ್ಮದ್,ನಾಗರಾಜ್, ಮುಹಮ್ಮದ್ ಹುಸೈನ್,ಮುಹಮ್ಮದ್ ಇಕ್ಬಾಲ್ ಆರೋಪಿಯ ಪತ್ತೆ ಕಾರ್ಯದಲ್ಲಿ ಪಾಲ್ಗೊಂಡಿದ್ದರು.
