ಹದಿಮೂರು ವರ್ಷದ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ 57 ವರ್ಷದ ಆರೋಪಿಯನ್ನು ಮೂಡುಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಪಿ.ಜಿ.ನೇತೃತ್ವದ ಪೊಲೀಸರು ಬಂಧಿಸಿದ್ದಾರೆ.
ಮೂಡುಬಿದಿರೆ ಪ್ರಾಂತ್ಯ ಗ್ರಾಮದ ಲಾಡಿ ಅಜಂಕಲ್ಲು ನಿವಾಸಿ ಪ್ರಕಾಶ ( 57) ಬಂಧಿತ ಆರೋಪಿ.
ತನ್ನ ಪಕ್ಕದ್ಮನೆಯಲ್ಲಿ ಯಾರೂ ಇಲ್ಲದ ವೇಳೆ ಹೋಗುತ್ತಿದ್ದ ಆರೋಪಿ ಹದಿಮೂರು ವರ್ಷದ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಎಂದು ಆರೋಪಿಸಲಾಗಿದೆ.
ಈ ಬಗ್ಗೆ ಮೂಡುಬಿದಿರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಇನ್ಸ್ಪೆಕ್ಟರ್ ಸಂದೇಶ್ ನೇತೃತ್ವದ ಪೊಲೀಸರು ಆರೋಪಿಯನ್ನು ಬಂಧಿಸಿ ಫೋಕ್ಸೋ ಪ್ರಕರಣ ದಾಖಲಿಸಿಕೊಂಡಿದ್ದಾರೆ.
