ಕರಾವಳಿಯ ಅತಿದೊಡ್ಡ ಕಣ್ಣಿನ ಆಸ್ಪತ್ರೆಗಳ ಸಮೂಹವಾಗಿರುವ ಪ್ರಸಾದ್ ನೇತ್ರಾಲಯದ ಮೂಡುಬಿದಿರೆಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆಯು ಇಂದು ಬೆಳಿಗ್ಗೆ 10-30 ಕ್ಕೆ ಮೂಡುಬಿದಿರೆ ಬಡಗ ಬಸದಿ ಬಳಿಯ ಫಾರ್ಚೂನ್ ಹೈವೆಯಲ್ಲಿ ಉದ್ಘಾಟನೆಗೊಳ್ಳಲಿದೆ.
ಜೈನ ಮಠದ ಸ್ವಾಮೀಜಿಯವರು ದೀಪ ಪ್ರಜ್ವಲನೆಗೈದು ಆಶೀರ್ವದಿಸಲಿದ್ದು ಡಾ.ಮೋಹನ ಆಳ್ವ ನೂತನ ಆಸ್ಪತ್ರೆಯನ್ನು ಉದ್ಘಾಟಿಸಲಿದ್ದಾರೆ.
ಶಾಸಕ ಉಮಾನಾಥ ಕೋಟ್ಯಾನ್ ಅಧ್ಯಕ್ಷತೆ ವಹಿಸಲಿದ್ದು ಮಾಜಿ ಸಚಿವ ಕ.ಅಭಯಚಂದ್ರ, ಪುರಸಭಾಧ್ಯಕ್ಷೆ ಜಯಶ್ರೀ ಕೇಶವ್,ಪುರಸಭಾ ಸದಸ್ಯ ಪಿ.ಕೆ.ಥೋಮಸ್, ಮಹೇಂದ್ರವರ್ಮ ಜೈನ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆಂದು ಪ್ರಸಾದ್ ನೇತ್ರಾಲಯದ ನಿರ್ದೇಶಕರಾದ ಡಾ.ಕೃಷ್ಣಪ್ರಸಾದ್ ಕೂಡ್ಲು ಅವರು ತಿಳಿಸಿದ್ದಾರೆ.
